ಮಂಗಳೂರು: ಹಿಂದೂ ದೇವರನ್ನು ಅಶ್ಲೀಲವಾಗಿ ಹಾಗೂ ಅಪಹಾಸ್ಯವಾಗಿ ಮುದ್ರಿಸಿ ಅವಮಾನ ಮಾಡಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಕುರಿತು ದೂರು ದಾಖಲಾಗಿದೆ.
ಎಐ ಆಧಾರಿತ ಹಿಂದೂ ದೇವರ (Hindu gods) ಚಿತ್ರಗಳನ್ನು ಅಶ್ಲೀಲವಾಗಿ ರಚಿಸಿ ಸಾಮಾಜಿಕ ಜಾಲತಾಣದಲ್ಲಿ ದುಷ್ಕರ್ಮಿಗಳು ಅಪ್ಲೋಡ್ ಮಾಡಿದ್ದಾರೆ. ಹೀಗಾಗಿ ಇದನ್ನು ವಿರೋಧಿಸಿ ಹಿಂದೂ ಜನಜಾಗೃತಿ ಸಮಿತಿಯಿಂದ ಮಂಗಳೂರಿನ ಉರ್ವಾ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಎಫ್ ಐಆರ್ ದಾಖಲಾಗಿದೆ.
Fact Vid” ಎಂಬ ಹೆಸರಿನ ಫೇಸ್ ಬುಕ್ ಪೇಜ್ ನಲ್ಲಿ ಎಐ ಆಧಾರಿತ ಹಿಂದೂ ದೇವರ ಅಶ್ಲೀಲ ಚಿತ್ರಗಳನ್ನು ರಚಿಸಿ ಪೋಸ್ಟ್ ಮಾಡಲಾಗಿದೆ. ಶಿವ, ಕೃಷ್ಣ, ರಾಮ, ಗಣೇಶ ದೇವರು ಸ್ತ್ರೀಯೊಂದಿಗೆ ಅಶ್ಲೀಲವಾಗಿ ವರ್ತಿಸುತ್ತಿರುವಂತೆ ಈ ಫೋಟೋಗಳಲ್ಲಿ ಚಿತ್ರಿಸಲಾಗಿದೆ.
ಓಡಿಸುತ್ತಿರುವಂತೆ, ಕುಸ್ತಿ ಆಡುತ್ತಿರುವಂತೆ ಚಿತ್ರಗಳನ್ನು ಹಂಚಿಕೊಂಡಿದ್ದು, ಈ ಫೋಟೋಗಳಿಗೆ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟಾಗುವಂತೆ ಕಮೆಂಟ್ ಹಾಕಲಾಗುತ್ತಿದೆ. ಕೂಡಲೇ ಇದಕ್ಕೆ ಸಂಬಂಧಿಸಿದವರನ್ನು ಬಂಧಿಸಿ, ಶಿಕ್ಷೆ ವಿಧಿಸಬೇಕೆಂದು ಮನವಿ ಮಾಡಲಾಗಿದೆ.