ಶಿವಮೊಗ್ಗ: ಇಲ್ಲಿನ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ಅನ್ಯಕೋಮಿನ ಯುವಕರು ಹಿಂದೂ ದೇವರಿಗೆ ಅಪರಮಾನ ಮಾಡಿರುವ ಘಟನೆ ನಡೆದಿದೆ. ಗಣಪತಿ ವಿಗ್ರಹ ಹಾಗೂ ನಾಗರ ಕಲ್ಲಿಗೆ ಅಪಮಾನ ಮಾಡಿರುವ ಆರೋಪ ಕೇಳಿ ಬಂದಿದೆ.
ಬಡಾವಣೆಯ ಮುಖ್ಯರಸ್ತೆಯಲ್ಲಿ ಇತ್ತೀಚೆಗೆ ಪ್ರತಿಷ್ಠಾಪನೆ ಮಾಡಿದ್ದ ಗಣಪತಿ ವಿಗ್ರಹಕ್ಕೆ ಒದ್ದು, ನಾಗರ ಕಲ್ಲನ್ನು ಚರಂಡಿಗೆ ಎಸೆದಿರುವ ಆರೋಪ ಕೇಳಿ ಬಂದಿದೆ. ಅನ್ಯ ಕೋಮಿನ ಯುವಕರು ಈ ಕೃತ್ಯ ಎಸಗಿದ್ದಾರೆಂಬ ಆರೋಪ ಕೇಳಿ ಬಂದಿದೆ. ಈ ವಿಷಯ ಬಹಿರಂಗವಾಗುತ್ತಿದ್ದಂತೆ ಹಿಂದೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಸ್ಥಳೀಯರ ಆಕ್ರೋಶ ಹೊರಹಾಕಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಎಸ್ಪಿ ಜಿ.ಕೆ ಮಿಥುನ್ ಕುಮಾರ್, ಶಿವಮೊಗ್ಗ ಸಬ್ ಡಿವಿಜನ್-2 ಡಿವೈಎಸ್ಪಿ ಸಂಜೀವ್ ಕುಮಾರ್ ಆಗಮಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.