ಬೆಂಗಳೂರು: ಕೇಂದ್ರ ಸರ್ಕಾರದ ಹುದ್ದೆ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ದೇಶದ ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 258 ಹುದ್ದೆಗಳ (Intelligence Bureau Recruitment 2025) ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 258 ಅಸಿಸ್ಟಂಟ್ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್ ಗ್ರೇಡ್-2 ಸೇರಿ ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಇಂಟೆಲಿಜೆನ್ಸ್ ಬ್ಯೂರೋ
ಒಟ್ಟು ಹುದ್ದೆಗಳು: 258
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಹುದ್ದೆಗಳ ಹೆಸರು: ಅಸಿಸ್ಟಂಟ್ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್ ಗ್ರೇಡ್-2
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ನವೆಂಬರ್ 16
ಕನಿಷ್ಠ 18ರಿಂದ 27 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 1.42 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತಿದೆ. ದೇಶದ ಹಲವು ಭಾಗಗಳಲ್ಲಿ ನೇಮಕಾತಿ ನಡೆಯುತ್ತಿದೆ. ಅರ್ಜಿ ಸಲ್ಲಿಸುವವರು mha.gov.in ವೆಬ್ ಸೈಟ್ ಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಪ್ರತಿಯೊಬ್ಬರಿಗೂ 100 ರೂಪಾಯಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಕಂಪ್ಯೂಟರ್ ಸೈನ್ಸ್ ಹಾಗೂ ಇನ್ಫಾರ್ಮೇಷನ್ ಟೆಕ್ನಾಲಜಿ ವಿಭಾಗದಲ್ಲಿ 90 ಹಾಗೂ ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಷನ್ ವಿಭಾಗದಲ್ಲಿ 168 ಹುದ್ದೆಗಳು ಖಾಲಿ ಇವೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಬಿಇ, ಬಿಟೆಕ್ ಅಥವಾ ಸ್ನಾತಕೋತ್ತರ ಪದವಿ ಪಡೆದಿರಬೇಕು. ಗೇಟ್ ಪರೀಕ್ಷೆಯ ಅಂಕಗಳು, ಕೌಶಲ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.
ಇದನ್ನೂ ಓದಿ : 43 ವರ್ಷಗಳ ನರಕಯಾತನೆ, ಕೊನೆಗೂ ನಿರ್ದೋಷಿ, ಆದರೂ ಗಡಿಪಾರಿನ ಭೀತಿಯಲ್ಲಿ ಭಾರತೀಯ ಮೂಲದ ವ್ಯಕ್ತಿ



















