ದಾವಣಗೆರೆ: ಭದ್ರಾ ನೀರಿಗಾಗಿ ದಾವಣಗೆರೆಯಲ್ಲಿ ಮೂರು ಜಿಲ್ಲೆಗಳ ರೈತರ ನಡುವೆ ತೀವ್ರ ಸಂಘರ್ಷ ಶುರುವಾಗಿದೆ. 10 ದಿನಗಳ ಕಾಲ ಕೇವಲ 1 ಟಿಎಂಸಿ ನೀರು ಬಿಡಲು ಸರ್ಕಾರ ಆದೇಶಿಸಿರುವುದಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಡದಂಡೆಗೆ ಹೆಚ್ಚು ಮತ್ತು ಬಲದಂಡೆಗೆ ಕಡಿಮೆ ನೀರು ಬಿಡಲಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕರೇ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಈ ವೇಳೆ ಪ್ರತಿಭಟನಾಕಾರರು ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಇದೇ ವಿಚಾರವಾಗಿ ಶಾಸಕ ಶಾಂತನಗೌಡ ಅವರು ತಮ್ಮ ರಾಜೀನಾಮೆ ನಿರ್ಧಾರವನ್ನು ವಾಪಸ್ ಪಡೆದಿದ್ದಾರೆ.


















