ಬೆಂಗಳೂರು : ಸಂಪುಟದಲ್ಲಿ ಒಳ ಮೀಸಲಾತಿ ವರದಿಗೆ ಒಪ್ಪಿಗೆ ನೀಡಲಾಗಿದೆ. 2022ರ ನವಂಬರ್ ನಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ಎಸ್. ಸಿ., ಎಸ್.ಟಿ. ಮೀಸಲಾತಿ ಶೇ. 7ರಷ್ಟು ಏರಿಕೆ ಮಾಡಲಾಗಿತ್ತು. ಆ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಅವರು ಸುಳ್ಳನ್ನೇ ಮುಂದಿಟ್ಟುಕೊಂಡು ಊರೂರು ಸುತ್ತಿದ್ದರು. ಇನ್ನು, ಒಳಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ಹಿಂದುಳಿದವರ ಬಗ್ಗೆ ಕಾಳಜಿವಹಿಸಬೇಕು ಎಂದು ಶಾಸಕ ಅರವಿಂದ ಬೆಲ್ಲದ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಬೆಲ್ಲದ್, ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೇಪೆ ಹಚ್ಚುವ ಕೆಲಸ ಮಾಡಿದೆ. ಹಿಂದುಳಿದ ವರ್ಗಗಳಿಗೆ ನ್ಯಾಯ ನೀಡುವ ಅವಕಾಶವಿತ್ತು, ಆ ಅವಕಾಶವನ್ನು ಸಂಪೂರ್ಣ ನೀರಿಗೆ ಹಾಕುವ ಕೆಲಸ ಮಾಡಿದೆ. ಸದನದಲ್ಲಿ ಸಿಎಂ ಏನು ಪ್ರತಿಕ್ರಿಯಿಸುತ್ತಾರೆಂದು ನೋಡಿಕೊಂಡು ಸದನದ ಒಳಗೂ ಹೊರಗೂ ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ.
ಇನ್ನು, ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಧರ್ಮಸ್ಥಳ ವಿಚಾರದಲ್ಲಿ ಸತ್ಯ ಹೊರಬರಬೇಕಿದೆ. ಈಗಾಗಲೇ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದಿದ್ದಾರೆ ಎಂದಿದ್ದಾರೆ.