ಬೆಂಗಳೂರು : ಸರಕಾರ ನ್ಯಾನಾಗಮೋಹನ್ ದಾಸ್ ಆಯೋಗದ ಶಿಫಾರಸು ಆಧರಿಸಿ ಒಳಮೀಸಲಾತಿಯನ್ನು ಘೋಷಣೆ ಮಾಡಿದ ಬೆನ್ನಲ್ಲೇ, ನಗರದ ಫ್ರೀಡಂ ಪಾರ್ಕ್ ನಲ್ಲಿ ಒಳಮೀಸಲಾತಿ ಹೋರಾಟಗಾರರು ಸಂಭ್ರಮಾಚರಣೆ ಮಾಡಿದರು.
ಮೂರು ದಶಕಗಳ ಒಳಮೀಸಲಾತಿ ಹೋರಾಟಕ್ಕೆ ಜಯ ಸಿಕ್ಕಿದೆ. ಸರಕಾರ ಒಳಮೀಸಲಾತಿ ಜಾರಿ ಮಾಡಿದೆ ಎಂದು ಘೋಷಣೆ ಕೂಗಿದರು. ಇದೇ ವೇಳೆ ಹೋರಾಟಗಾರರು ಪಟಾಕಿ ಸಿಡಿಸಿ, ಸಿಹಿ ಹಂಚಿ, ಪರಸ್ಪರ ಶುಭಾಶಯ ಕೋರಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಒಳಮೀಸಲಾತಿ ಹೋರಾಟಗಾರ ಅಂಬಣ್ಣ ಅರೋಲಿಕರ್, ಬಸವರಾಜ್ ಕೌತಾಳ್, ಕರಿಯಪ್ಪ ಗುಡಿಮನೆ ಸೇರಿದಂತೆ ಅಪಾರ ಸಂಖ್ಯೆಯ ಹೋರಾಟಗಾರರು, ಕಾರ್ಯಕರ್ತರು ಹಾಜರಿದ್ದರು.