ಎಸ್ಸಿ ಮೀಸಲು ವರ್ಗೀಕರಣ ವಿಚಾರವಾಗಿ ನ್ಯಾ. ನಾಗಮೋಹನ್ ದಾಸ್ ಸಮಿತಿ ವರದಿಯನ್ನು ಗುರುವಾರ ಸಂಪುಟ ಸಭೆಯಲ್ಲಿ ಸ್ವೀಕರಿಸಲಾಗಿದ್ದು, ವರದಿಗೆ ದಲಿತ ಸಚಿವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಚರ್ಚಿಸಲು ಆ. 16ರಂದು ವಿಶೇಷ ಸಂಪುಟ ಸಭೆ ಕರೆಯಲಾಗಿದೆ. ಸದ್ಯದ ಸಾಧ್ಯತೆ ನೋಡಿದರೆ ಅಂದುಕೊಂಡಷ್ಟು ಸುಲಭದಲ್ಲಿ ವಿವಾದ ಬಗೆಹರಿಯುವ ಸಾಧ್ಯತೆ ಕ್ಷೀಣವಾಗುತ್ತಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ವರದಿಯನ್ನು ನೀಡಲಾಯಿತು.