ಚಿಕ್ಕಬಳ್ಳಾಪುರ: ಅಂತರರಾಜ್ಯ ಮಟ್ಟದಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಬಾಗೇಪಲ್ಲಿ ಪೊಲೀಸ್ ಠಾಣೆ ಪೊಲೀಸರು ಸುಮಾರು 10 ಲಕ್ಷ ರೂಪಾಯಿ ಮೌಲ್ಯದ 13 ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತನನ್ನು ಆಂಧ್ರಪ್ರದೇಶ ಮೂಲದ ವಿಶ್ವನಾಥ್ ಎಂದು ಗುರುತಿಸಲಾಗಿದೆ. ಈತನಿಂದ ವಿವಿಧ ಕಡೆಗಳಲ್ಲಿ ಕಳ್ಳತನ ಮಾಡಿದ್ದ ಬೈಕ್‌ಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.
2022ರಲ್ಲಿ ಬಾಗೇಪಲ್ಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆ ಮುಂದುವರಿಸಿದ ವೇಳೆ ಆರೋಪಿಯನ್ನು ಬಂಧಿಸಲು ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತನಿಂದ ಒಟ್ಟು 10 ಲಕ್ಷ ರೂಪಾಯಿ ಮೌಲ್ಯದ 13 ಬೈಕ್‌ಗಳನ್ನು ವಶಪಡಿಸಿಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಚಾ.ನಗರ | ಅಡುಗೆ ಅನಿಲ ಸಿಲಿಂಡರ್ ಸೋರಿಕೆಯಿಂದ ದಂಪತಿಗೆ ಗಾಯ



















