ಬೆಂಗಳೂರು: ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ (BJP) ಸೋಲು ಕಂಡಿದೆ. ಹೀಗಾಗಿ ಇಂದು ಆತ್ಮಾವಲೋಕನ ಸಭೆ ನಡೆಯಿತು.
ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್ ದಾಸ್ ಅಗರ್ವಾಲ್ ಹಾಗೂ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ (Vijayendra) ತರಾಟೆ ತೆಗೆದುಕೊಂಡರು. ಈ ಸಂದರ್ಭದಲ್ಲಿ ಕಲಬುರಗಿ ಕ್ಷೇತ್ರದ ಬಿಜೆಪಿ ಮುಖಂಡರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚುನಾವಣೆ ವೇಳೆ ಕ್ಷೇತ್ರದಲ್ಲಿ ಹೊಂದಾಣಿಕೆ ಮಾಡಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಶಿವರಾಜ್ನಿಂದ ಹೊಂದಾಣಿಕೆ ಆರೋಪ ಮಾಡಿದರು.
ಹೊಂದಾಣಿಕೆ ಕಾರಣದಿಂದ ಬಿಜೆಪಿಗೆ ಸೋಲಾಗಿದೆ. ಕಲಬುರಗಿ ಲೋಕಸಭಾ ಕ್ಷೇತ್ರದ ಬಗ್ಗೆ ನನಗೆ ಸಂಪೂರ್ಣ ಮಾಹಿತಿಯಿದೆ. ಪಕ್ಷ, ಅಭ್ಯರ್ಥಿ ವಿರುದ್ಧ ಯಾರೆಲ್ಲ ಮಸಲತ್ತು ಮಾಡಿದ್ದರೆಂದು ಗೊತ್ತಿದೆ ಎಂದು ಮುಖಂಡರ ಸಭೆಯಲ್ಲಿ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ನಾಯಕರಿಗೆ ರಾಧಾಮೋಹನ ದಾಸ್ ಕೂಡ ತರಾಟೆ ತೆಗೆದುಕೊಂಡಿದ್ದು, ವಿಧಾನಸಭಾ ಚುನಾವಣೆಯಲ್ಲಿ ಪಡೆದ ಮತಗಳಿಗಿಂತಲೂ ಕಡಿಮೆ ಬಂದಿದೆ. ಕಾಂಗ್ರೆಸ್ ಅಭ್ಯರ್ಥಿಗೆ ಟಕ್ಕರ್ ಕೊಡುವ ಬದಲು ಹಸ್ತಲಾಘವ ಮಾಡಿದ್ದೀರಿ. ಕಲಬುರಗಿಯಲ್ಲಿ ಬಿಜೆಪಿ ಸೋಲಿಗೆ ಒಳಒಪ್ಪಂದವೇ ಕಾರಣವೆಂದು ಆಕ್ರೋಶ ವ್ಯಕ್ತಪಡಿಸಿದರು.
ಶಾಸಕ ಬಸವರಾಜ ಮತ್ತಿಮೂಡ್, ಮಣಿಕಂಠ ರಾಠೋಡ್, ಚಂದ್ರಪಾಟೀಲ್, ರಘುನಾಥ ಮಲ್ಕಾಪುರೆ, ನಿನಿತ್ ಗುತ್ತೇದಾರ್ ಸೇರಿದಂತೆ ಹಲವರು ಇದ್ದರು.