ಶಿರಸಿ : ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ನಡೆಯುವ ದಕ್ಷಿಣ ಭಾರತದ ಅತಿದೊಡ್ಡ ಜಾತ್ರೆಯೆನಿಸಿರುವ ಶ್ರೀ ಮಾರಿಕಾಂಬಾ ದೇವಿ ಜಾತ್ರೆಯ ಅಧಿಕೃತ ಆಮಂತ್ರಣವನ್ನು ಬಿಡುಗಡೆ ಮಾಡಲಾಗಿದೆ. ಲಕ್ಷಾಂತರ ಭಕ್ತರು ಪಾಲ್ಗೊಳ್ಳುವ ಈ ಜಾತ್ರೆ ಫೆಬ್ರವರಿ 24ರಿಂದ ಮಾರ್ಚ್ 4ರವರೆಗೆ ಭಕ್ತಿಭಾವದಿಂದ ನಡೆಯಲಿದೆ.
ಜಾತ್ರೆಗೆ ಭರದ ಸಿದ್ಧತೆಗಳನ್ನು ಈಗಾಗಲೇ ಆಡಳಿತ ಮಂಡಳಿ ಹಾಗೂ ಉತ್ತರ ಕನ್ನಡ ಜಿಲ್ಲಾಡಳಿತ ಆರಂಭಿಸಿದ್ದು, ಶಾಂತಿ, ಭದ್ರತೆ ಹಾಗೂ ಸುವ್ಯವಸ್ಥಿತ ವ್ಯವಸ್ಥೆ ಕಲ್ಪಿಸುವತ್ತ ಗಮನ ಹರಿಸಲಾಗಿದೆ.
ಜಾತ್ರೆ ಪೂರ್ವ ಸಿದ್ಧತೆಗಳ ಹಿನ್ನೆಲೆಯಲ್ಲಿ ಶಾಸಕರು ಹಾಗೂ ಸಚಿವರು ಈಗಾಗಲೇ ಪ್ರಾಥಮಿಕ ಸಭೆ ನಡೆಸಿದ್ದು, ವಿವಿಧ ಇಲಾಖೆಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಿದ್ದಾರೆ. ಸಂಚಾರ ವ್ಯವಸ್ಥೆ, ಕುಡಿಯುವ ನೀರು, ಆರೋಗ್ಯ, ಸ್ವಚ್ಛತೆ, ವಿದ್ಯುತ್, ಪೊಲೀಸ್ ಭದ್ರತೆ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸಲು ಚರ್ಚಿಸಲಾಗಿದೆ.
ಪ್ರತಿ ಐದು ವರ್ಷಕ್ಕೊಮ್ಮೆ ನಡೆಯುವ ಶಿರಸಿ ಮಾರಿಕಾಂಬಾ ದೇವಿ ಜಾತ್ರೆಗೆ ರಾಜ್ಯದ ನಾನಾ ಭಾಗಗಳಲ್ಲದೆ ದೇಶದ ವಿವಿಧೆಡೆಯಿಂದ ಭಕ್ತರು ಆಗಮಿಸುವ ನಿರೀಕ್ಷೆಯಿದ್ದು, ಈ ಬಾರಿ ಇನ್ನೂ ಹೆಚ್ಚು ಭಕ್ತರ ಆಗಮನ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ : ಲಂಡನ್ ಮಾದರಿಯ ಅಂಬಾರಿ ಡಬಲ್ ಡೆಕ್ಕರ್ ಬಸ್ ಇನ್ಮುಂದೆ ಬೆಂಗಳೂರಲ್ಲಿ | ಹೆಚ್.ಕೆ. ಪಾಟೀಲ್ ಚಾಲನೆ



















