ಬೆಂಗಳೂರು: ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ ಆಗಿರುವ ಇಂಡಿಯನ್ ಓವರ್ ಸೀಸ್ ಬ್ಯಾಂಕಿನಲ್ಲಿ (IOB Apprentice Recruitment 2025) ಖಾಲಿ ಇರುವ 750 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಪ್ರೆಂಟಿಸ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಆಗಸ್ಟ್ 10ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಂಬಳದ ಜತೆಗೆ ತರಬೇತಿ ಪಡೆಯಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಇಂಡಿಯನ್ ಓವರ್ ಸೀಸ್ ಬ್ಯಾಂಕ್
ಒಟ್ಟು ಹುದ್ದೆಗಳು: 750
ಹುದ್ದೆಗಳ ಹೆಸರು: ಅಪ್ರೆಂಟಿಸ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಕೊನೆಯ ದಿನಾಂಕ: ಆಗಸ್ಟ್ 20
ಕರ್ನಾಟಕ, ತಮಿಳುನಾಡು, ಉತ್ತರ ಪ್ರದೇಶ, ಮಹಾರಾಷ್ಟ್ರ, ದೆಹಲಿ, ಒಡಿಶಾ, ರಾಜಸ್ಥಾನ, ಗುಜರಾತ್ ಸೇರಿ ದೇಶಾದ್ಯಂತ ಖಾಲಿ ಇರುವ ಬ್ರ್ಯಾಂಚ್ ಗಳಲ್ಲಿ ನೇಮಕಾತಿ ನಡೆಯುತ್ತಿದೆ. ಕರ್ನಾಟಕದಲ್ಲಿ ಒಟ್ಟು 6 ಹುದ್ದೆಗಳು ಖಾಲಿ ಇವೆ. ದೇಶದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಪದವಿ ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ನೇಮಕಾತಿ ಹೊಂದಿದವರಿಗೆ ಮಾಸಿಕ 15 ಸಾವಿರ ರೂಪಾಯಿ ಸ್ಟೈಪೆಂಡ್ ನೀಡಲಾಗುತ್ತದೆ.
ಕನಿಷ್ಠ 20 ವರ್ಷದಿಂದ ಗರಿಷ್ಠ 28 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು. ಕಳೆದ ಏಪ್ರಿಲ್ ನಲ್ಲಿ ಪದವಿ ಪಾಸಾದವರಿಗೆ ಒಳ್ಳೆಯ ಅವಕಾಶವಿದೆ. ಈಗಾಗಲೇ ಬೇರೆ ಬ್ಯಾಂಕಿನಲ್ಲಿ ತರಬೇತಿ ಪಡೆದವರು, ಪಡೆಯುತ್ತಿರುವವರು ಅರ್ಜಿ ಸಲ್ಲಿಸಲು ಅವಕಾಶವಿಲ್ಲ ಎಂದು ತಿಳಿಸಲಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿಯವರಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಆಸಕ್ತಿ ಇರುವವರು https://bfsissc.com/ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.