ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ 509 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಟ್ರೇಡ್ ಅಪ್ರೆಂಟಿಸ್ ಸೇರಿ ಹಲವು ಹುದ್ದೆಗಳ ನೇಮಕಾತಿಗಾಗಿ (IOCL Apprentices Recruitment 2025) ಅಧಿಸೂಚನೆ ಹೊರಡಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್
ಒಟ್ಟು ಹುದ್ದೆಗಳು: 509
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜನವರಿ 9
ಉದ್ಯೋಗ ಸ್ಥಳ: ದೇಶಾದ್ಯಂತ
248 ಟೆಕ್ನಿಶಿಯನ್ ಅಪ್ರೆಂಟಿಸ್, 127 ಟ್ರೇಡ್ ಅಪ್ರೆಂಟಿಸ್, 107 ಗ್ರಾಜುಯೇಟ್ ಅಪ್ರೆಂಟಿಸ್ ಹಾಗೂ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಐಟಿ, ಡಿಪ್ಲೋಮಾ, ಪದವಿ ಹಾಗೂ ಪಿಯುಸಿ ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಕನಿಷ್ಠ 18 ವರ್ಷದಿಂದ 24 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಎಸ್ಸಿ, ಎಸ್ಟಿಯವರಿಗೆ 5 ವರ್ಷ ಹಾಗೂ ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ www.iocl.com/apprenticeshipsಗೆ ಭೇಟಿ ನೀಡಬೇಕು
ಅಪ್ರೆಂಟಿಸ್ ಸೇರಿ ನಿಮಗೆ ಬೇಕಾದ ಹುದ್ದೆಗಳನ್ನು ಆಯ್ಕೆ ಮಾಡಿಕೊಳ್ಳಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಿ ಅರ್ಜಿ ಸಲ್ಲಿಸಬೇಕು
ಅರ್ಜಿ ಸಲ್ಲಿಕೆಯ ಪ್ರತಿಯನ್ನು ಡೌನ್ ಲೋಡ್ ಮಾಡಿಟ್ಟುಕೊಳ್ಳಬೇಕು
ಇದನ್ನೂ ಓದಿ: ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಮುಖ್ಯ ತರಬೇತುದಾರರ ನೇಮಕಾತಿ : 2 ಲಕ್ಷ ರೂ. ವೇತನ



















