ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ 537 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ (IOCL Apprentices Recruitment 2025) ಅಧಿಸೂಚನೆ ಹೊರಡಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದ್ದು, ಸೆಪ್ಟೆಂಬರ್ 18 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್
ಒಟ್ಟು ಹುದ್ದೆಗಳು: 537
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಸೆಪ್ಟೆಂಬರ್ 18
ಉದ್ಯೋಗ ಸ್ಥಳ: ದೇಶಾದ್ಯಂತ
ದೇಶದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಪಿಯುಸಿ, ಪದವಿ, ಐಟಿಐ ಅಥವಾ ಡಿಪ್ಲೋಮಾ ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸುವವರು ಕನಿಷ್ಠ 18ರಿಂದ ಗರಿಷ್ಠ 24 ವರ್ಷದೊಳಗಿನವರಾಗಿರಬೇಕು ಎಂದು ಸೂಚಿಸಲಾಗಿದೆ. ಕರ್ನಾಟಕದಲ್ಲೂ ಹಲವು ಹುದ್ದೆಗಳು ಖಾಲಿ ಇವೆ. ನೇಮಕಾತಿ ಹೊಂದಿದವರಿಗೆ ಒಂದು ವರ್ಷದವರೆಗೆ ತರಬೇತಿ ನೀಡಲಾಗುತ್ತದೆ. ತರಬೇತಿ ಅವಧಿಯಲ್ಲಿ ಸ್ಟೈಪೆಂಡ್ ಕೂಡ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ iocl.com ಗೆ ಭೇಟಿ ನೀಡಬೇಕು
ಅಪ್ರೆಂಟಿಸ್ ಹುದ್ದೆಗಳನ್ನು ಆಯ್ಕೆ ಮಾಡಿಕೊಳ್ಳಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಿ ಅರ್ಜಿ ಸಲ್ಲಿಸಬೇಕು
ಅರ್ಜಿ ಸಲ್ಲಿಕೆಯ ಪ್ರತಿಯನ್ನು ಡೌನ್ ಲೋಡ್ ಮಾಡಿಟ್ಟುಕೊಳ್ಳಬೇಕು