ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ 185 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಗ್ರೇಡ್ ಎ ಹುದ್ದೆಗಳಾದ ಎಂಜಿನಿಯರ್ಸ್ ಅಥವಾ ಆಫೀಸರ್ಸ್ ಹುದ್ದೆಗಳ ನೇಮಕಾತಿಗಾಗಿ (IOCL Apprentices Recruitment 2025) ಅಧಿಸೂಚನೆ ಹೊರಡಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದ್ದು, ಸೆಪ್ಟೆಂಬರ್ 28 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್
ಒಟ್ಟು ಹುದ್ದೆಗಳು: 185
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಸೆಪ್ಟೆಂಬರ್ 28
ಉದ್ಯೋಗ ಸ್ಥಳ: ದೇಶಾದ್ಯಂತ
ನೇಮಕಾತಿ ಹೊಂದಿದವರಿಗೆ ಮಾಸಿಕ 1.6 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ದೇಶದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಬಿಇ ಅಥವಾ ಬಿ.ಟೆಕ್ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸುವವರು ಕನಿಷ್ಠ 26ರಿಂದ ಗರಿಷ್ಠ 41 ವರ್ಷದೊಳಗಿನವರಾಗಿರಬೇಕು ಎಂದು ಸೂಚಿಸಲಾಗಿದೆ.
ಕಂಪ್ಯೂಟರ್ ಆಧಾರಿತ ಪರೀಕ್ಷೆ, ಗ್ರೂಪ್ ಡಿಸ್ಕಷನ್, ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಜನರಲ್, ಇಡಬ್ಲ್ಯೂಎಸ್, ಒಬಿಸಿಯವರಿಗೆ 500 ರೂಪಾಯಿ ಅರ್ಜಿ ಶುಲ್ಕವಿದೆ. ಉಳಿದವರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ https://ibpsonline.ibps.in/iocljun25/ ಗೆ ಭೇಟಿ ನೀಡಬೇಕು
ಎಂಜಿನಿಯರ್ಸ್/ಆಫೀಸರ್ಸ್ ಹುದ್ದೆಗಳನ್ನು ಆಯ್ಕೆ ಮಾಡಿಕೊಳ್ಳಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಿ ಅರ್ಜಿ ಸಲ್ಲಿಸಬೇಕು
ಅರ್ಜಿ ಸಲ್ಲಿಕೆಯ ಪ್ರತಿಯನ್ನು ಡೌನ್ ಲೋಡ್ ಮಾಡಿಟ್ಟುಕೊಳ್ಳಬೇಕು