ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ರೆವೆನ್ಯೂ ಅಕೌಂಟಂಟ್ ಸೇರಿ ಹಲವು ಹುದ್ದೆಗಳ ನೇಮಕಾತಿಗಾಗಿ (IOCL Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್
ಒಟ್ಟು ಹುದ್ದೆಗಳು: ವಿವಿಧ
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಆಗಸ್ಟ್ 25
ಉದ್ಯೋಗ ಸ್ಥಳ: ಕರ್ನಾಟಕ, ತಮಿಳುನಾಡು
ಕರ್ನಾಟಕದ ಬೆಂಗಳೂರು ಹಾಗೂ ತಮಿಳುನಾಡಿನ ಚೆನ್ನೈನಲ್ಲಿ ನೇಮಕಾತಿ ನಡೆಯುತ್ತಿದೆ. ರೆವೆನ್ಯೂ ಅಕೌಂಟಂಟ್ ಹಾಗೂ ಸರ್ವೇಯರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 64 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ 36,400 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ iocl.com ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗಳನ್ನು ಆಯ್ಕೆ ಮಾಡಿಕೊಳ್ಳಬೇಕು
ಅಧಿಸೂಚನೆ ಓದಿಕೊಂಡು ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಅರ್ಜಿ ಹಾಗೂ ಅಗತ್ಯ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು
ಅರ್ಜಿ ಸಲ್ಲಿಸಬೇಕಾದ ವಿಳಾಸ
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್, ಮಹಾ ವ್ಯವಸ್ಥಾಪಕರು (ಮಾನವ ಸಂಪನ್ಮೂಲ), ಸೌತ್ ರೀಜನ್ ಪೈಪ್ಲೈನ್ಸ್, ನಂಬರ್ 6/13, ವ್ಹೀಟ್ ಕ್ರಾಫ್ಟ್ ರಸ್ತೆ, ಹೌಸ್ ಆಫ್ ಫೋರ್ ಫ್ರೇಮ್ಸ್, ನುಂಗಂಬಾಕಮ್, ಚೆನ್ನೈ – 600034.
ಇದನ್ನೂ ಓದಿ : 2025ರ ಕೆಂಪುಕೋಟೆ ಸ್ಫೋಟದ ಹಿಂದೆ ಅಲ್‌ಖೈದಾ ಕೈವಾಡ : ವಿಶ್ವಸಂಸ್ಥೆ ವರದಿ



















