ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ 394 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಪ್ರೆಂಟಿಸ್ ಸೇರಿ ಹಲವು ಹುದ್ದೆಗಳ ನೇಮಕಾತಿಗಾಗಿ (IOCL Apprentices Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್
ಒಟ್ಟು ಹುದ್ದೆಗಳು: 394
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಫೆಬ್ರವರಿ 10
ಉದ್ಯೋಗ ಸ್ಥಳ: ಕರ್ನಾಟಕ ಸೇರಿ ದೇಶಾದ್ಯಂತ
ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ. ಕರ್ನಾಟಕದಲ್ಲಿ ಐದು ಹುದ್ದೆಗಳು ಖಾಲಿ ಇವೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಟೆಕ್ನಿಶಿಯನ್ ಅಪ್ರೆಂಟಿಸ್, ಟ್ರೇಡ್ ಅಪ್ರೆಂಟಿಸ್, ಡೇಟಾ ಎಂಟ್ರಿ ಆಪರೇಟರ್ ಹಾಗೂ ಡಾಮೆಸ್ಟಿಟ್ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.
ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ ಹಾಗೂ ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಕನಿಷ್ಠ 18 ವರ್ಷದಿಂದ 24 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಎಸ್ಸಿ, ಎಸ್ಟಿಯವರಿಗೆ 5 ವರ್ಷ ಹಾಗೂ ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ www.iocl.com/apprenticeshipsಗೆ ಭೇಟಿ ನೀಡಬೇಕು
ಅಪ್ರೆಂಟಿಸ್ ಹುದ್ದೆಗಳನ್ನು ಆಯ್ಕೆ ಮಾಡಿಕೊಳ್ಳಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಿ ಅರ್ಜಿ ಸಲ್ಲಿಸಬೇಕು
ಅರ್ಜಿ ಸಲ್ಲಿಕೆಯ ಪ್ರತಿಯನ್ನು ಡೌನ್ ಲೋಡ್ ಮಾಡಿಟ್ಟುಕೊಳ್ಳಬೇಕು
ಇದನ್ನೂ ಓದಿ : ನಿಮ್ಹಾನ್ಸ್ ಸಂಸ್ಥೆಯಲ್ಲಿ 4 ಹುದ್ದೆಗಳ ನೇಮಕಾತಿ | ಸಂದರ್ಶನದ ದಿನಾಂಕ ಇಲ್ಲಿದೆ



















