ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಸಂಸ್ಥೆಯಲ್ಲಿ ಭರ್ಜರಿ ನೇಮಕಾತಿ ನಡೆಯುತ್ತಿದೆ. ಸಂಸ್ಥೆಯಲ್ಲಿ ಖಾಲಿ ಇರುವ 450 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಎಂಜಿನಿಯರ್ಸ್ ಸೇರಿ ಹಲವು ಹುದ್ದೆಗಳ ನೇಮಕಾತಿಗಾಗಿ (IOCL Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್
ಒಟ್ಟು ಹುದ್ದೆಗಳು: 450
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಸೆಪ್ಟೆಂಬರ್ 3
ಉದ್ಯೋಗ ಸ್ಥಳ: ದೇಶಾದ್ಯಂತ
ದೇಶದ ಯಾವುದೇ ಭಾಗದಲ್ಲಿ ಕೆಲಸ ಮಾಡಲು ಬಯಸುವವರು ಅರ್ಜಿ ಸಲ್ಲಿಸಬಹುದು. ಗ್ರಾಜ್ಯುಯೇಟ್ ಎಂಜಿನಿಯರ್, ಆಫೀಸರ್, ಲಾ ಆಫೀಸರ್, ಡಿಪ್ಲೋಮಾ ಎಂಜಿನಿಯರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿ.ಇ, ಬಿ.ಟೆಕ್, ಎಂಬಿಎ, ಡಿಪ್ಲೋಮಾ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಎಸ್ಸಿ, ಎಸ್ಟಿ, ವಿಶೇಷ ಚೇತನರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಉಳಿದವರಿಗೆ 1 ಸಾವಿರ ರೂ. ಅರ್ಜಿ ಶುಲ್ಕವಿದೆ.
ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಕಂಪ್ಯೂಟರ್ ಆಧಾರಿತ ಪರೀಕ್ಷೆ, ಗ್ರೂಪ್ ಟಾಸ್ಕ್ ಹಾಗೂ ಸಂದರ್ಶನದ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ 1.6 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿಗಳನ್ನು ಸಲ್ಲಿಸುವವರು iocl.com ವೆಬ್ ಸೈಟ್ ಗೆ ಭೇಟಿ ನೀಡಬೇಕು. ಆನ್ ಲೈನ್ ಮೂಲಕವೇ ಅರ್ಜಿ ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು.
ಇದನ್ನೂ ಓದಿ : ಅಕ್ರಮ ಗೋಸಾಗಾಟದ ವಾಹನ ತಡೆದ ಭಜರಂಗ ದಳ ; ಚಾಲಕ ಪೊಲೀಸ್ ವಶಕ್ಕೆ



















