ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ವೇಳಾಪಟ್ಟಿ ಪ್ರಕಟವಾಗಿದ್ದು, ಮೊದಲ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ.
ಈ ಬಾರಿಯ ಪಂದ್ಯ ಮಾ. 22ರಿಂದ ಆರಂಭವಾಗಲಿದೆ. ಎರಡನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯವು ಸಂಜೆ 3.30 ರಿಂದ ಆರಂಭವಾಗಲಿದೆ.
ಐಪಿಎಲ್ ನ ಎಲ್ ಕ್ಲಾಸಿಕೊ ಕದನವಾಗಿ ಗುರುತಿಸಿಕೊಂಡಿರುವ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮಧ್ಯದ ಪಂದ್ಯ ಮಾರ್ಚ್ 23ರಂದು ನಡೆಯಲಿದೆ. ಈ ಪಂದ್ಯ ರಾತ್ರಿ 7.30ಕ್ಕೆ ನಡೆಯಲಿದೆ.
ಮೊದಲ ಕ್ವಾಲಿಫೈಯರ್ ಪಂದ್ಯ ಮೇ. 20 ರಂದು ಹಾಗೂ ಮೇ. 21 ರಂದು ಎಲಿಮಿನೇಟರ್ ಪಂದ್ಯಗಳು ನಡೆಯಲಿದೆ. ಮೇ. 23 ರಂದು 2ನೇ ಕ್ವಾಲಿಫೈಯರ್ ಪಂದ್ಯ ಹಾಗೂ ಮೇ. 25 ರಂದು ಫೈನಲ್ ಪಂದ್ಯ ನಡೆಯಲಿದೆ. ಈ ಪಂದ್ಯಗಳಿಗೆ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂ ಆತಿಥ್ಯ ವಹಿಸಲಿದೆ.