ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಇಂಡಿಯನ್ ಪೋರ್ಟ್ ರೈಲ್ ಆ್ಯಂಡ್ ರೋಪ್ ವೇ ಕಾರ್ಪೊರೇಷನ್ (IPRCL Recruitment 2025)ನಲ್ಲಿ ಖಾಲಿ ಇರುವ 56 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮ್ಯಾನೇಜರ್ ಹಾಗೂ ಚೀಫ್ ಜನರಲ್ ಮ್ಯಾನೇಜರ್, ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಇಂಡಿಯನ್ ಪೋರ್ಟ್ ರೈಲ್ ಆ್ಯಂಡ್ ರೋಪ್ ವೇ ಕಾರ್ಪೊರೇಷನ್
ಒಟ್ಟು ಹುದ್ದೆಗಳು: 56
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಅಕ್ಟೋಬರ್ 10
ಉದ್ಯೋಗ ಸ್ಥಳ: ದೇಶಾದ್ಯಂತ
ಪದವಿ, ಡಿಪ್ಲೋಮಾ, ಬಿಇ, ಬಿಟೆಕ್, ಸ್ನಾತಕೋತ್ತರ ಪದವಿ ಪಡೆದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಗ್ರ್ಯಾಜುಯೇಟ್ ಅಪ್ರೆಂಟಿಸ್, ಡಿಪ್ಲೋಮಾ ಅಪ್ರೆಂಟಿಸ್, ಪ್ರಾಜೆಕ್ಟ್ ಸೈಟ್ ಮ್ಯಾನೇಜರ್, ಡೆಪ್ಯೂಟಿ ಮ್ಯಾನೇಜರ್, ಚೀಫ್ ಜನರಲ್ ಮ್ಯಾನೇಜರ್ ಸೇರಿ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ 2.8 ಲಕ್ಷ ರೂ.ವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಮೊದಲಿಗೆ iprcl.in ವೆಬ್ ಸೈಟ್ ಗೆ ಭೇಟಿ ನೀಡಿ, ಅಧಿಸೂಚನೆಯನ್ನು ಓದಬೇಕು. ಇದಾದ ಬಳಿಕ ಅರ್ಜಿ ನಮೂನೆಯನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು. ಅರ್ಜಿಯನ್ನು ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಿನ ವಿಳಾಸಗಳಿಗೆ ನಿಗದಿತ ದಿನಾಂಕದೊಳಗೆ ಕಳುಹಿಸಬೇಕು.
ಗ್ರ್ಯಾಜುಯೇಟ್ ಆ್ಯಂಡ್ ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಳಾಸ: General Manager (HR), Indian Port Rail and Ropeway Corporation Limited, Corporate Office: 4th Floor, Nirman Bhavan, Mumbai Port Trust Building, M.P Road, Mazgaon (E), Mumbai-400010
ಮ್ಯಾನೇಜರ್, ಡೆಪ್ಯೂಟಿ ಮ್ಯಾನೇಜರ್, ಚೀಫ್ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಳಾಸ: CGM(HR), Indian Port Rail and Ropeway Corporation Limited, Corporate Office: 4th Floor, Nirman Bhavan, Mumbai Port Trust Building, M.P Road, Mazgaon (E), Mumbai-400010.