ಹಾವೇರಿ : ಇರಾನ್-ಇಸ್ರೇಲ್ ಯುದ್ದದ ಪರಿಣಾಮ ಹಲವು ಕೊಲ್ಲಿ ರಾಷ್ಟ್ರಗಳಲ್ಲಿ ಕನ್ನಡಿಗರು ಸಿಲುಕಿದ್ದಾರೆ. ಅಬುಧಾಬಿಯಲ್ಲಿರುವ ಹಾವೇರಿ ತಾಲೂಕಿನ ಕನವಳ್ಳಿ ಗ್ರಾಮದ ಎಂಜಿನಿಯರ್ ರಾಘವೇಂದ್ರ ಕುದುರಿ ಎಂಬವರ ಕುಟುಂಬ ಆತಂಕದಲ್ಲಿ ದಿನ ಕಳೆಯುತ್ತಿದೆ.
ಪ್ರಸ್ತುತ ಯುಇಎಯ ಅಬುಧಾಬಿಯಲ್ಲಿ ಕುಟುಂಬದೊಂದಿಗೆ ನೆಲೆಸಿರುವ ಇವರು ಸ್ವದೇಶಕ್ಕೆ ಮರಳಲಾಗದ ಸ್ಥಿತಿಯಲ್ಲಿದ್ದಾರೆ. “ಮನೆಗಳ ಮೇಲೆ ಕ್ಷಿಪಣಿ ದಾಳಿ ನಡೆಯುತ್ತಿದೆ. ಸ್ನಾನ ಗೃಹದ ಮೇಲ್ಛಾವಣಿ ಕುಸಿದು ಬಿದ್ದಿದೆ” ಎಂದು ರಾಘವೇಂದ್ರ ಕುದುರಿ ಆತಂಕ ವ್ಯಕ್ತಪಡಿಸಿದ್ದಾರೆ.
ಬಾಗಿಲುಗಳು ವೇಗವಾಗಿ ಅಲುಗಾಡುತ್ತಿವೆ, ನಮ್ಮನ್ನು ಭಾರತಕ್ಕೆ ಕರೆಸಿಕೊಳ್ಳುವ ವ್ಯವಸ್ಥೆ ಮಾಡಿ ಎಂದು ಅವರು ಮನವಿ ಮಾಡಿದ್ದಾರೆ. ಪತ್ನಿ, ಇಬ್ಬರು ಮಕ್ಕಳು ಸೇರಿ ಒಟ್ಟು ನಾಲ್ಕು ಮಂದಿ ಅಬುಧಾಬಿಯಲ್ಲಿ ಸಿಲುಕಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : ಪಿಯು ವಿದ್ಯಾರ್ಥಿನಿ ಮೇಲೆ ಸೋದರ ಮಾವನಿಂದಲೇ ಭೀಕರ ಹಲ್ಲೆ.. ಕುಟುಂಬಕ್ಕೂ ಧಮ್ಕಿ


















