ಬೆಂಗಳೂರು: ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತೀಯ ರೈಲ್ವೆ ಕೆಟರಿಂಗ್ ಹಾಗೂ ಪ್ರವಾಸೋದ್ಯಮ ನಿಗಮದಲ್ಲಿ (IRCTC Recruitment 2026) ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಒಂದು ಗ್ರೂಪ್ ಜನರಲ್ ಮ್ಯಾನೇಜರ್ ಹುದ್ದೆಯ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ರೈಲ್ವೆ ಕೆಟರಿಂಗ್ ಹಾಗೂ ಪ್ರವಾಸೋದ್ಯಮ ನಿಗಮ (IRCTC)
ಹುದ್ದೆಗಳ ಹೆಸರು: ಗ್ರೂಪ್ ಜನರಲ್ ಮ್ಯಾನೇಜರ್
ಒಟ್ಟು ಹುದ್ದೆಗಳು: 1
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜನವರಿ 28
ಪಶ್ಚಿಮ ಬಂಗಾಳದ ಕೋಲ್ಕತ್ತದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಗರಿಷ್ಠ 58 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ಶಾರ್ಟ್ ಲಿಸ್ಟಿಂಗ್ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಮೊದಲಿಗೆ irctc.com ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಲ್ಲಿ ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಓದಬೇಕು. ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬೇಕು. ನೇಮಕಾತಿ ಹೊಂದಿದವರಿಗೆ ಮಾಸಿಕ 67 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ
GM(HR&CC), IRCTC Corporate office, 4th floor, Tower-D, World Trade Centre, New Delhi-110029. ಹಾಗೆಯೇ, ಅರ್ಜಿ ಹಾಗೂ ದಾಖಲೆಗಳ ಸಾಫ್ಟ್ ಕಾಪಿಯನ್ನು deputation@irctc.com ಗೆ ಮೇಲ್ ಮಾಡಬಹುದಾಗಿದೆ.
ಇದನ್ನೂ ಓದಿ:ಕೇಂದ್ರ ಸರ್ಕಾರದ NTPCಯಲ್ಲಿ 25 ಹುದ್ದೆಗಳ ನೇಮಕಾತಿ | 1.4 ಲಕ್ಷ ರೂಪಾಯಿ ಸ್ಯಾಲರಿ


















