ಬೆಂಗಳೂರು : ನೀವು ಬಿಎಸ್ಸಿ, ಬಿಬಿಎ ಅಥವಾ ಎಂಬಿಎ ಮುಗಿಸಿದ್ದೀರಾ? ಕೇಂದ್ರ ಸರ್ಕಾರದ ಉದ್ಯೋಗಕ್ಕಾಗಿ ಪ್ರಯತ್ನ ನಡೆಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಲಭಿಸಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತೀಯ ರೈಲ್ವೆ ಕೆಟರಿಂಗ್ ಹಾಗೂ ಪ್ರವಾಸೋದ್ಯಮ ನಿಗಮದಲ್ಲಿ (IRCTC Recruitment 2026) ಖಾಲಿ ಇರುವ 28 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಟೂರಿಸಂ ಮಾನಿಟರ್ ಸೇರಿ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ರೈಲ್ವೆ ಕೆಟರಿಂಗ್ ಹಾಗೂ ಪ್ರವಾಸೋದ್ಯಮ ನಿಗಮ (IRCTC)
ಹುದ್ದೆಗಳ ಹೆಸರು: ಟೂರಿಸಂ ಮಾನಿಟರ್ ಇತ್ಯಾದಿ
ಒಟ್ಟು ಹುದ್ದೆಗಳು: 28
ನೇಮಕಾತಿ ವಿಧಾನ: ನೇರ ಸಂದರ್ಶನ
ಉದ್ಯೋಗ ಸ್ಥಳ: ದೇಶಾದ್ಯಂತ
ಸಂದರ್ಶನದ ದಿನಾಂಕ: ಅಕ್ಟೋಬರ್ 9
6 ಟೂರಿಸಂ ಮಾನಿಟರ್ ಹಾಗೂ 22 ಹಾಸ್ಪಿಟಾಲಿಟಿ ಮಾನಿಟರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ನಡೆಯುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿಎಸ್ಸಿ, ಬಿಬಿಎ ಹಾಗೂ ಎಂಬಿಎ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ನೇಮಕಾತಿ ಹೊಂದಿದವರಿಗೆ ಮಾಸಿಕ 35 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ. ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಮೊದಲಿಗೆ irctc.com ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಲ್ಲಿ ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಓದಬೇಕು. ಅಧಿಸೂಚನೆಯಲ್ಲಿ ತಿಳಿಸಿದ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬೇಕು.
ಸಂದರ್ಶನ ನಡೆಯುವ ಸ್ಥಳಗಳು
- Institute of Hotel Management (IHM), Near Indian Overseas Bank, V.S.S. Nagar, Bhubaneswar, Odisha 751007 05-10-2026
- Institute of Hotel Management (IHM), F-Row, Vidya Nagar, DD Colony, Hyderabad, Telangana 500007
ಇದನ್ನೂ ಓದಿ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್



















