ಪಾಕಿಸ್ತಾನದ ಮೇಲೆ ಭಾರತೀಯ ಸೇನಾ ಆಪರೇಷನ್ ಸಿಂಧೂರ ದಾಳಿ ಮಾಡಿದ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾತನಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಗ್ರಗಾಮಿಗಳ ಅಟ್ಟಹಾಸಕ್ಕೆ 26 ಭಾರತೀಯರು ಪ್ರಾಣ ಕಳೆದುಕೊಂಡಿದ್ದರು. ದೇಶದಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಪ್ರತಿಯೊಬ್ಬ ಭಾರತೀಯನಿಗೂ ಪ್ರತೀಕಾರಕ್ಕಾಗಿ ಕಾಯುತ್ತಿದ್ದ. ಪ್ರತೀಕಾರ ತೀರಿಸಿಕೊಳ್ಳಲೇಬೇಕೆಂದು ಪ್ರತಿಯೊಬ್ಬರು ಹೇಳುತ್ತಿದ್ದರು. ಪಾಕಿಸ್ತಾನ ಉಗ್ರರನ್ನು ಪೋಷಿಸುತ್ತಲೇ ಬರುತ್ತಿತ್ತು. ಪ್ರಧಾನಿಗಳು ಕೂಡ ಹಲವಾರು ಬಾರಿ ಹೇಳಿದ್ದರು. ಇದನ್ನು ಇಲ್ಲಿಗೆ ಬಿಡುವುದಿಲ್ಲ ಎಂದಿದ್ದರು. ಈಗ ಅದೇ ರೀತಿ ನಡೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಮಧ್ಯರಾತ್ರಿ ಪಾಕಿಸ್ತಾನದಲ್ಲಿ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಕಾರ್ಯಾಚರಣೆ ಆರಂಭ ಮಾಡಲಾಗಿತ್ತು. ಪಾಕಿಸ್ತಾನದ 4 ಕಡೆ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ 5 ಕಡೆ ಕಾರ್ಯಾಚರಣೆ ನಡೆಸಲಾಗಿದೆ. ಪ್ರತಿಯೊಬ್ಬ ಭಾರತೀಯರು ಈ ಸಂದರ್ಭದಲ್ಲಿ ಸೈನಿಕರಿಗೆ ಬೆಂಬಲ ನೀಡಬೇಕಾಗುತ್ತದೆ. ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿಸಬೇಕು ಎಂದಿದ್ದಾರೆ.
ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಒಂದು ಟ್ವೀಟ್ ಮಾಡಿದೆ. ಅನುಕೂಲದ ಅತ್ಯಂತ ಶಕ್ತಿಯುತ ಅಸ್ತ್ರ ಅಂದರೆ “ಶಾಂತಿ”. ಅಂದರೆ ಮಹಾತ್ಮ ಗಾಂಧಿ ಅವರನ್ನು ಕಾಂಗ್ರೆಸ್ ನವರು ನೆನಪು ಮಾಡಿಕೊಂಡಿದ್ದಾರೆ. ರಾಹುಲ್ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ, ಸಿಎಂ, ಡಿಸಿಎಂ ಸೇರಿದಂತೆ ಕಾಂಗ್ರೆಸ್ ನಾಯಕರು ಭಾರತದ ಪರ ಇದ್ದಾರಾ? ಅಥವಾ ಪಾಕಿಸ್ತಾನ ಪರ ಇದ್ದಾರಾ? ಎಂಬುವುದನ್ನು ಸ್ಪಷ್ಟಪಡಿಸಲಿ ಎಂದು ಪ್ರಶ್ನೆ ಮಾಡಿದ್ದಾರೆ.