ಬೆಂಗಳೂರಿನ ಹೊರವಲಯದಲ್ಲಿ ಡ್ರಗ್ಸ್ ಪಾರ್ಟಿ ನಡೆದಿತ್ತು ಎಂಬ ಆರೋಪಕ್ಕೆ ಪುಷ್ಠಿ ಸಿಕ್ಕಂತಾಗಿದೆ.
ಈಗಾಗಲೇ ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದ ನಟಿ ಹೇಮಾ ಸಿಸಿಬಿ ಪೊಲೀಸರ ವಶದಲ್ಲಿದ್ದಾರೆ. ಅಕೆಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ವಿಚಾರಣೆಗೆ ನಡೆಸಲಾಗಿದೆ. ಇತ್ತ ಇದರ ಮಧ್ಯೆ ಬೆಂಗಳೂರಿನ ಹೊರವಲಯದಲ್ಲಿ ಆಗಾಗ್ಗೆ ರೇವ್ ಪಾರ್ಟಿಯ ಹೆಸರಿನಲ್ಲಿ ಡ್ರಗ್ಸ್ ಸೇವನೆಯಾಗುತ್ತಿರುವುದು ಬೆಳಕಿಗೆ ಬಂದಿದೆ.
ಈಗಾಗಲೇ ಸಿಸಿಬಿ ವಿಚಾರಣೆಯಲ್ಲಿ ಹಲವಾರು ವಿಚಾರಗಳ ಬಗ್ಗೆ ನಟಿ ಹೇಮಾ ಬಾಯಿ ಬಿಟ್ಟಿದ್ದು, ಆಗಾಗ್ಗೆ ರೇವ್ ಪಾರ್ಟಿ ಹೆಸರಿನಲ್ಲಿ ಮಾಧಕ ಲೋಕವೇ ಇಲ್ಲಿ ಸೃಷ್ಠಿಯಾಗುತ್ತದೆ ಎಂಬ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.