ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಕಳೆದ 14 ದಿನಗಳಿಂದ ಜೈಲು ಪಾಲಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿಯೋ? ಅಲ್ಲವೋ? ಎಂಬುವುದು ನಾಳೆ ತೀರ್ಮಾನವಾಗಲಿದೆ.
ಪ್ರಜ್ವಲ್ ಭವಿಷ್ಯ ಜುಲೈ.30ರಂದು ನಿರ್ಧಾರವಾಗಲಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 26 ಸಾಕ್ಷಿಗಳ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (Special Court) ತೆಗೆದುಕೊಂಡಿದೆ. ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿಯೋ ಅಥವಾ ಅಲ್ಲವೋ ಎಂದು ತೀರ್ಪು ನೀಡಲಿದೆ.
ಸರಣಿ ಅತ್ಯಾಚಾರ ಆರೋಪ ಹೊತ್ತು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲು ಪಾಲಾಗಿದ್ದಾರೆ. ಈಗಾಗಲೇ ಅವರು ಜೈಲಿನಲ್ಲಿದ್ದು 14 ತಿಂಗಳು ಕಳೆದಿವೆ. ಮೂರು ಅತ್ಯಾಚಾರ ಪ್ರಕರಣ, ಒಂದು ಲೈಂಗಿಕ ದೌರ್ಜನ್ಯ ಸೇರಿದಂತೆ ನಾಲ್ಕು ಪ್ರಕರಣಗಳ ಪೈಕಿ ಒಂದು ಪ್ರಕರಣ ಈಗ ನಿರ್ಣಾಯಕ ಹಂತ ತಲುಪಿದ್ದು, ಬುಧವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಲಿದೆ.
ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು. ಈ ಕುರಿತು ಹೊಳೆನರಸೀಪುರದ ಮಹಿಳೆಯೊಬ್ಬರು ದೂರು ನೀಡಿದ್ದರು. ಪ್ರಕರಣ ಸಂಬಂಧ 2024ರ ಮೇ 31ರಂದು ಪ್ರಜ್ವಲ್ ರೇವಣ್ಣ ಅವರನ್ನು ಪೊಲೀಸರು ಬಂಧಿಸಿದ್ದರು. ತನಿಖೆ ನಡೆಸಿದ ಎಸ್‌ಐಟಿ ಆರೋಪಪಟ್ಟಿ ಸಲ್ಲಿಸಿತ್ತು. 7 ತಿಂಗಳಿನಲ್ಲಿ ಸಾಕ್ಷ್ಯ ವಿಚಾರಣೆ ಪೂರ್ಣಗೊಳಿಸಿದ ಜಡ್ಜ್ ಸಂತೋಷ್ ಗಜಾನನ ಭಟ್ ಅವರು ನಾಳೆಗೆ ತೀರ್ಪು ಕಾಯ್ದಿರಿಸಿದ್ದಾರೆ.



















