ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಸಿಎಂ ಹಾಗೂ ನೂತನ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಜೀನಾಮೆ ಸಲ್ಲಿಸಿದ್ದಾರೆ. ಹೀಗಾಗಿ ಕಾಂಗ್ರೆಸ್ ನ ಅಭ್ಯರ್ಥಿ ಕುರಿತು ಈಗಿನಿಂದಲೇ ಚರ್ಚೆಗಳು ಶುರುವಾಗಿವೆ.
ಇತ್ತೀಚೆಗಷ್ಟೇ ಮಂಡ್ಯ ಸಂಸದರಾಗಿ ಆಯ್ಕೆಯಾಗಿರುವ ಹೆಚ್ ಡಿ ಕುಮಾರಸ್ವಾಮಿ ರಾಜೀನಾಮೆ ಸಲ್ಲಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸೋಲು ಕಂಡಿರುವ ಡಿ.ಕೆ. ಸುರೇಶ್ ಕಣಕ್ಕೆ ಇಳಿಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಹೀಗಾಗಿ ಕಾಂಗ್ರೆಸ್ ಅಭ್ಯರ್ಥಿಯ ಕುರಿತು ಚರ್ಚೆಗಳು ಜೋರಾಗಿವೆ.
ಆದರೆ, ಸ್ಪರ್ಧೆ ಮಾಡುವುದಿಲ್ಲ ಎಂದು ಡಿ.ಕೆ. ಸುರೇಶ್ ಹೇಳುತ್ತಿದ್ದಾರೆ. ಕಾಂಗ್ರೆಸ್ ವಲಯದಲ್ಲಿ ಮಾಜಿ ಸಂಸದನ ಮನವೊಲಿಕೆ ಪ್ರಯತ್ನಗಳು ಕೂಡ ಮುಂದುವರೆದಿವೆ. ಒಂದು ವೇಳೆ ಸುರೇಶ್ ಒಪ್ಪದಿದ್ದರೆ ಬೇರೆಯವರು ಆಖಾಡಕ್ಕೆ ಇಳಿಯುವ ಸಾಧ್ಯತೆ ಇದೆ.
ಡಿ.ಕೆ. ಸುರೇಸ್ ಸ್ಪರ್ಧೆಗೆ ಒಪ್ಪದಿದ್ದಲ್ಲಿ ಸಿ.ಪಿ.ಯೋಗೇಶ್ವರ್ ಪುತ್ರಿ ನಿಶಾ ಯೋಗೇಶ್ವರ್ ರನ್ನು ಅಖಾಡಕ್ಕೆ ಇಳಿಸಲು ಕಾಂಗ್ರೆಸ್ ತಂತ್ರ ಹೂಡಿದೆ ಎನ್ನಲಾಗುತ್ತಿದೆ. ಇತ್ತೀಚೆಗಷ್ಟೇ ತಂದೆ ಮಗಳನ್ನು ದೂರ ಮಾಡುವುದು ಸರಿಯಲ್ಲ. ಹೀಗಾಗಿ ಸಮಯ ಬಂದಾಗ ನೋಡೋಣ ಎಂದು ಡಿಕೆಶಿ ಹೇಳಿದ್ದರು. ಸದ್ಯ ತಂದೆಯ ವಿರುದ್ಧವೇ ಪುತ್ರಿಯನ್ನು ಅಖಾಡಕ್ಕೆ ಇಳಿಸ್ತಾರಾ ಎಂಬುವುದನ್ನು ಕಾಯ್ದು ನೋಡಬೇಕಿದೆ.
