ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಆ್ಯಂಟ್ರಿಕ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ ಖಾಲಿ ಇರುವ ಹಲವು ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ವಿವಿಧ ನಿರ್ದೇಶಕ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಫ್ ಲೈನ್ ಮೂಲಕ ಅರ್ಜಿಗಳನ್ನು (ISRO ANTRIX Recruitment 2025) ಸಲ್ಲಿಸಬಹುದಾಗಿದೆ ಎಂದು ಇಸ್ರೋ ತಿಳಿಸಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಆ್ಯಂಟ್ರಿಕ್ಸ್ ಲಿಮಿಟೆಡ್
ಹುದ್ದೆಗಳ ಹೆಸರು: ನಿರ್ದೇಶಕರು
ಒಟ್ಟು ಹುದ್ದೆಗಳು: ವಿವಿಧ
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಡಿಸೆಂಬರ್ 22
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಸಿಎ, ಎಂಬಿಎ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಕನಿಷ್ಠ 45ರಿಂದ 65 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 67 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ https://www.isro.gov.in/ ಗೆ ಭೇಟಿ ನೀಡಬೇಕು
- ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
- ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು.
- ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಬೇಕು
_ ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು
ಅರ್ಜಿ ಸಲ್ಲಿಸಬೇಕಾದ ವಿಳಾಸ
The Director (PSEs), Department of Space, Government of India, Antariksh Bhavan, New BEL Road, Bengaluru–560231
ಇದನ್ನೂ ಓದಿ: ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ 70 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 1.12 ಲಕ್ಷ ರೂ. ಸಂಬಳ



















