ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ಬೆಂಗಳೂರಿನಲ್ಲೇ ಇರುವ ಬಾಹ್ಯಾಕಾಶ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ (Department of Space Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಅಕೌಂಟ್ಸ್ ಆಫೀಸರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ನೇಮಕಾತಿಯ ಕುರಿತು ಸಂಕ್ಷಿಪ್ತ ಮಾಹಿತಿ
ನೇಮಕಾತಿ ಸಂಸ್ಥೆ: ಬಾಹ್ಯಾಕಾಶ ಇಲಾಖೆ
ಒಟ್ಟು ಹುದ್ದೆಗಳು: ವಿವಿಧ
ಹುದ್ದೆಗಳ ಹೆಸರು: ಅಕೌಂಟ್ಸ್ ಆಫೀಸರ್
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ನವೆಂಬರ್ 21
ಉದ್ಯೋಗ ಸ್ಥಳ: ಬೆಂಗಳೂರು
ಫೈನಾನ್ಸ್ ವಿಭಾಗದಲ್ಲಿ ಅಕೌಂಟ್ಸ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ನಿಗದಿಪಡಿಸಿಲ್ಲ. ಅರ್ಜಿ ಸಲ್ಲಿಸಲು ಗರಿಷ್ಠ 56 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ https://www.isro.gov.in ಗೆ ಭೇಟಿ ನೀಡಬೇಕು. ನಿಮಗೆ ಬೇಕಾದ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆ ಓದಿಕೊಳ್ಳಬೇಕು. ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿ ಹಾಗೂ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು ಎಂದು ತಿಳಿಸಲಾಗಿದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ
ನಿರ್ದೇಶಕರು (ಸಿಬ್ಬಂದಿ ಮತ್ತು ಆಡಳಿತ),
ಬಾಹ್ಯಾಕಾಶ ಇಲಾಖೆ,
ಅಂತರಿಕ್ಷ ಭವನ, ಹೊಸ ಬಿಇಎಲ್ ರಸ್ತೆ,
ಬೆಂಗಳೂರು – 560 094
ಇದನ್ನೂ ಓದಿ:ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಭರ್ಜರಿ 350 ಹುದ್ದೆಗಳ ನೇಮಕಾತಿ: ಹೀಗೆ ಅರ್ಜಿ ಸಲ್ಲಿಸಿ



















