ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರದ (ಇಸ್ರೋ) ದೂರ ಸಂವೇದಿ ಕೇಂದ್ರದಲ್ಲಿ ಖಾಲಿ ಇರುವ 96 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಪ್ರೆಂಟಿಸ್ ಹುದ್ದೆಗಳನ್ನು (ISRO NRSC Apprentice Recruitment 2025) ಭರ್ತಿ ಮಾಡಿಕೊಳ್ಳಲು ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕದ ಬೆಂಗಳೂರಿನಲ್ಲಿಯೇ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸುವರ್ಣಾವಕಾಶವಾಗಿದೆ. ಕೂಡಲೇ ಅರ್ಜಿ ಸಲ್ಲಿಸುವ ಮೂಲಕ ಉದ್ಯೋಗ ಗಿಟ್ಟಿಸಿಕೊಳ್ಳಬಹುದು.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರ (ಇಸ್ರೋ)
ಒಟ್ಟು ಹುದ್ದೆಗಳು: 96
ಹುದ್ದೆಗಳ ಹೆಸರು: ಅಪ್ರೆಂಟಿಸ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 9
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ, ಡಿಪ್ಲೋಮಾ, ಬಿ.ಇ, ಬಿ.ಟೆಕ್, ಬಿಎಸ್ಸಿ, ಬಿ.ಕಾಂ ಪದವಿ ಪಡೆದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ನೇಮಕಾತಿ ಹೊಂದಿದವರಿಗೆ ಮಾಸಿಕ 8 ಸಾವಿರ ರೂಪಾಯಿಯಿಂದ 9 ಸಾವಿರ ರೂಪಾಯಿವರೆಗೆ ಸ್ಟೈಪೆಂಡ್ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ https://www.nrsc.gov.in/nrscnew/ ಗೆ ಭೇಟಿ ನೀಡಬೇಕು
ISRO NRSC ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು
ಆನ್ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಎಲ್ಲ ಮಾಹಿತಿಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಅರ್ಜಿ ಸಲ್ಲಿಸಿದ ಬಳಿಕ ಅರ್ಜಿ ನಮೂನೆಯ ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು



















