ಬೆಂಗಳೂರು: ದೇಶದ ಪ್ರತಿಷ್ಠ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO NRSC Recruitment 2025) ನ್ಯಾಷನಲ್ ರಿಮೋಟ್ ಸೆನ್ಸಿಂಗ್ ಸೆಂಟರ್ ನಲ್ಲಿ ಖಾಲಿ ಇರುವ 13 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಟೆಕ್ನಿಕಲ್ ಅಸಿಸ್ಟಂಟ್, ಟೆಕ್ನಿಶಿಯನ್-ಬಿ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಇಸ್ರೋದ ನ್ಯಾಷನಲ್ ರಿಮೋಟ್ ಸೆನ್ಸಿಂಗ್ ಸೆಂಟರ್ (ISRO NRSC)
ಒಟ್ಟು ಹುದ್ದೆಗಳು: 13
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಉದ್ಯೋಗ ಸ್ಥಳ: ಹೈದರಾಬಾದ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ನವೆಂಬರ್ 30
ಟೆಕ್ನಿಕಲ್ ಅಸಿಸ್ಟಂಟ್, ಟೆಕ್ನಿಶಿಯನ್-ಬಿ ಹಾಗೂ ಡ್ರಾಟ್ಸ್ ಮ್ಯಾನ್-ಬಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಐಟಿಐ ಅಥವಾ ಡಿಪ್ಲೋಮಾ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ನೇಮಕಾತಿ ಹೊಂದಿದವರಿಗೆ ಮಾಸಿಕ 1.42 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 18ರಿಂದ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಕಂಪ್ಯೂಟರ್ ಆಧಾರಿತ ಪರೀಕ್ಷೆ, ಕೌಶಲ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ https://www.isro.gov.in/NRSCRecruitment2025_4.html ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು.
ಇದನ್ನೂ ಓದಿ : ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಅಸಿಸ್ಟಂಟ್ ಪ್ರೊಫೆಸರ್ ಹುದ್ದೆ : ನೇರ ಸಂದರ್ಶನ ಮೂಲಕ ನೇಮಕ


















