ಬೆಂಗಳೂರು : ಕರ್ಣಾಟಕದ ಬೆಂಗಳೂರಿನಲ್ಲೇ ದೊಡ್ಡ ಹುದ್ದೆಯನ್ನು ಹುಡುಕುತ್ತಿರುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಭಾರತೀಯ ಬಾಹ್ಯಾಕಾಶ ಸಂಶೋಧಾನ ಸಂಸ್ಥೆಯ (ಇಸ್ರೋ) ನ್ಯೂ ಸ್ಪೇಸ್ ಇಂಡಿಯಾ ಲಿಮಿಟೆಡ್ ನಲ್ಲಿ (ಎನ್ ಎಸ್ ಐ ಎಲ್) ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಚೇರ್ಮನ್ ಕಮ್ ಮ್ಯಾನೇಜಿಂಗ್ ಡೈರೆಕ್ಟರ್ (ISRO NSIL Chairman cum Managing Director Recruitment 2026) ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಇಸ್ರೋ ನ್ಯೂ ಸ್ಪೇಸ್ ಇಂಡಿಯಾ ಲಿಮಿಟೆಡ್ (ಎನ್ ಎಸ್ ಐ ಎಲ್)
ಹುದ್ದೆಗಳ ಹೆಸರು: ಚೇರ್ಮನ್ ಕಮ್ ಮ್ಯಾನೇಜಿಂಗ್ ಡೈರೆಕ್ಟರ್
ಒಟ್ಟು ಹುದ್ದೆಗಳು: 1
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: ಸೆಪ್ಟೆಂಬರ್ 21
ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಯಾವುದೇ ಮಂಡಳಿಗಳಲ್ಲಿ ಎಂಬಿಎ ಹಾಗೂ ಡಿಪ್ಲೋಮಾ ಸ್ನಾತಕೋತ್ತರ ಪದವಿ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಬೆಂಗಳೂರಿನಲ್ಲಿಯೇ ಕಾರ್ಯನಿರ್ವಹಿಸಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದಾಗಿದೆ. ಗರಿಷ್ಠ 45 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ನೇಮಕಾತಿ ಹೊಂದಿದವರಿಗೆ ಮಾಸಿಕ 2 ಲಕ್ಷ ರೂಪಾಯಿಯಿಂದ 3.7 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರು ಮೊದಲಿಗೆ isro.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅರ್ಜಿ ನಮೂನೆಯನ್ನು ಪ್ರಿಂಟ್ ಔಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
ನಿರ್ದೇಶಕರು (ಪಿಎಸ್ಇಗಳು), ಬಾಹ್ಯಾಕಾಶ ಇಲಾಖೆ, ಅಂತರಿಕ್ಷ ಭವನ, ಹೊಸ ಬಿಇಎಲ್ ರಸ್ತೆ, ಬೆಂಗಳೂರು – 560094.
ಇದನ್ನೂ ಓದಿ : ವಿದ್ಯಾರ್ಥಿನಿಯರಿಗೆ ವಾರ್ಷಿಕ 30 ಸಾವಿರ ರೂ. ಸ್ಕಾಲರ್ಶಿಪ್ : ಕೂಡಲೇ ಅರ್ಜಿ ಸಲ್ಲಿಸಿ



















