ಬೆಂಗಳೂರು : ನೀವೇನಾದರೂ ಪದವಿ, ಡಿಪ್ಲೋಮಾ ಮುಗಿಸಿ, ಸರ್ಕಾರದ ಉದ್ಯೋಗ ಪಡೆಯಲು ಪ್ರಯತ್ನಿಸುತ್ತಿದ್ದರೆ, ನಿಮಗೊಂದು ಗುಡ್ ನ್ಯೂಸ್ ದೊರೆತಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ (ISRO Recruitment 2026) ಖಾಲಿ ಇರುವ 242 ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಸಿಸ್ಟಂಟ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ
ಒಟ್ಟು ಹುದ್ದೆಗಳು: 242
ಹುದ್ದೆಗಳ ಹೆಸರು: ಅಸಿಸ್ಟಂಟ್ ಇತ್ಯಾದಿ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಆಗಸ್ಟ್ 15
ಕರ್ನಾಟಕದ ಬೆಂಗಳೂರು ಸೇರಿ ದೇಶದ ಹಲವೆಡೆ ಇರುವ ಇಸ್ರೋ ಕಚೇರಿಗಳಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು. ಬೆಂಗಳೂರಿನಲ್ಲಿಯೇ 75 ಹುದ್ದೆಗಳು ಖಾಲಿ ಇವೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ ಅಥವಾ ಡಿಪ್ಲೋಮಾ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 25,500 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ 28 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಎಸ್ಸಿ, ಎಸ್ಟಿ ಸಮುದಾಯದವರು ಬಿಟ್ಟು ಉಳಿದೆಲ್ಲರಿಗೂ 500 ರೂ. ಶುಲ್ಕವಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ isro.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಗಮನವಿಟ್ಟು ಓದಿಕೊಂಡು ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಆನ್ ಲೈನ್ ಅರ್ಜಿಯನ್ನು ಭರ್ತಿ ಮಾಡುವ ಜತೆಗೆ ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಇದನ್ನೂ ಓದಿ : ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಬೆನ್ನಲ್ಲೇ ದೇಶೀಯ ಕ್ರಿಕೆಟ್‌ನಲ್ಲಿ ಅಬ್ಬರಿಸಿದ ಬೆನ್ ಸ್ಟೋಕ್ಸ್



















