ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಸತೀಶ್ ಧವನ್ ಬಾಹ್ಯಾಕಾಶ ಸಂಶೋಧನಾ ಕೇಂದ್ರದಲ್ಲಿರುವ (SDSC SHAR) 151 ಹುದ್ದೆಗಳನ್ನು ನೇಮಕಾತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು. ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಹತೆ ಹೊಂದಿದವರು ಅರ್ಜಿ ಸಲ್ಲಿಸುವ ಮೂಲಕ ಉದ್ಯೋಗ ಗಿಟ್ಟಿಸಿಕೊಳ್ಳಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಇಸ್ರೋ ಸತೀಶ್ ಧವನ್ ಬಾಹ್ಯಾಕಾಶ ಸಂಶೋಧನಾ ಕೇಂದ್ರ
ಒಟ್ಟು ಹುದ್ದೆಗಳು: 151
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ನವೆಂಬರ್ 14
ಹುದ್ದೆಯ ಹೆಸರು: ಸೈಂಟಿಸ್ಟ್, ಎಂಜಿನಿಯರ್ ಇತ್ಯಾದಿ
ಸೈಂಟಿಸ್ಟ್, ಎಂಜಿನಿಯರ್, ಸೈಂಟಿಫಿಕ್ ಅಸಿಸ್ಟಂಟ್, ಲೈಬ್ರರಿ ಅಸಿಸ್ಟಂಟ್, ರೇಡಿಯೋಗ್ರಾಫರ್, ಟೆಕ್ನಿಶಿಯನ್, ಕುಕ್, ಫೈರ್ ಮ್ಯಾನ್, ನರ್ಸ್ ಸೇರಿ ವಿವಿಧ ಹುದ್ದೆಗಳು ಖಾಲಿ ಇವೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿ.ಇ, ಬಿ.ಎಸ್ಸಿ, ಡಿಪ್ಲೋಮಾ, ಐಟಿಐ, ಎಸ್ಸೆಸ್ಸೆಲ್ಸಿ ಪಾಸಾದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 21,700 ರಿಂದ 1,77,500 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಕನಿಷ್ಠ 18ರಿಂದ ಗರಿಷ್ಠ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಲಿಖಿತ ಪರೀಕ್ಷೆ, ಕೌಶಲ ಪರೀಕ್ಷೆ, ದಾಖಲೆ ಪರಿಶೀಲಹೆ ಹಾಗೂ ವೈದ್ಯಕೀಯ ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ, ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ. ಉಳಿದವರಿಗೆ 750 ರೂಪಾಯಿ ಅರ್ಜಿ ಶುಲ್ಕವಿದೆ. ಅರ್ಜಿ ಸಲ್ಲಿಸಲು ಬಯಸುವವರು http://apps.shar.gov.in/ ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.
ಇದನ್ನೂ ಓದಿ : ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ 35 ಹುದ್ದೆಗಳು: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್



















