ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಸ್ಪೇಸ್ ಅಪ್ಲಿಕೇಷನ್ಸ್ ಸೆಂಟರ್ ನಲ್ಲಿ (ISRO SAC Recruitment 2025) ಖಾಲಿ ಇರುವ ನಾಲ್ಕು ಹುದ್ದೆಗಳನ್ನು ನೇಮಕಾತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ನಾಲ್ಕು ಜೂನಿಯರ್ ಟ್ರಾನ್ಸ್ ಲೇಷನ್ ಆಫೀಸರ್ ಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಹತೆ ಹೊಂದಿದವರು ಅರ್ಜಿ ಸಲ್ಲಿಸುವ ಮೂಲಕ ಉದ್ಯೋಗ ಗಿಟ್ಟಿಸಿಕೊಳ್ಳಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಸ್ಪೇಸ್ ಅಪ್ಲಿಕೇಷನ್ಸ್ ಸೆಂಟರ್ (ISRO SAC)
ಒಟ್ಟು ಹುದ್ದೆಗಳು: 04
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 13
ಹುದ್ದೆಯ ಹೆಸರು: ಜೂನಿಯರ್ ಟ್ರಾನ್ಸ್ ಲೇಷನ್ ಆಫೀಸರ್
ಬೆಂಗಳೂರಿನಲ್ಲೂ ಇದೆ ಉದ್ಯೋಗ
ಬೆಂಗಳೂರಿನಲ್ಲೂ ಸ್ಪೇಸ್ ಅಪ್ಲಿಕೇಷನ್ಸ್ ಸೆಂಟರ್ ಇದ್ದು, ಇಲ್ಲೂ ಹುದ್ದೆಗಳು ಖಾಲಿ ಇವೆ. ಹಾಗಾಗಿ, ಕರ್ನಾಟಕದ ಅಭ್ಯರ್ಥಿಗಳು ಕೂಡ ಕೆಲಸ ಮಾಡಬಹುದಾಗಿದೆ. ಅದೇ ರೀತಿ, ಕೇರಳದ ತಿರುವನಂತಪುರಂ, ತಮಿಳುನಾಡಿನ ತಿರುನೆಲ್ವೇಲಿಯಲ್ಲೂ ಕೆಲಸ ಮಾಡುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಕನಿಷ್ಠ 18ರಿಂದ ಗರಿಷ್ಠ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಲಿಖಿತ ಪರೀಕ್ಷೆ, ಕೌಶಲ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ, ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ. ಉಳಿದವರಿಗೆ 750 ರೂಪಾಯಿ ಅರ್ಜಿ ಶುಲ್ಕವಿದೆ. ಅರ್ಜಿ ಸಲ್ಲಿಸಲು ಬಯಸುವವರು sac.gov.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.



















