ಬೆಂಗಳೂರು : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ಸ್ಪೇಸ್ ಅಪ್ಲಿಕೇಶನ್ ಸೆಂಟರ್ ನಲ್ಲಿ (SAC) ಖಾಲಿ ಇರುವ 49 ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸೈಂಟಿಸ್ಟ್/ಎಂಜಿನಿಯರ್ ಹುದ್ದೆಗಳನ್ನು (ISRO SAC Recruitment 2026) ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಇಸ್ರೋ ಸ್ಪೇಸ್ ಅಪ್ಲಿಕೇಶನ್ ಸೆಂಟರ್
ಒಟ್ಟು ಹುದ್ದೆಗಳು: 49
ಹುದ್ದೆಗಳ ಹೆಸರು: ಸೈಂಟಿಸ್ಟ್/ಎಂಜಿನಿಯರ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಫೆಬ್ರವರಿ 12
ಗುಜರಾತ್‌ನ ಅಹಮದಾಬಾದ್, ಕೇರಳದ ತಿರುವನಂತಪುರಂ, ತೆಲಂಗಾಣದ ಹೈದರಾಬಾದ್, ಮೇಘಾಲಯದ ಉಮಿಯಾಮ್ ನಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿ.ಇ, ಬಿ.ಟೆಕ್, ಬಿಎಸ್ಸಿ, ಎಂ.ಇ, ಎಂ.ಟೆಕ್ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವವರಿಗೆ 18 ವರ್ಷದಿಂದ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಮಹಿಳೆಯರು, ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 500 ರೂಪಾಯಿ ಅರ್ಜಿ ಶುಲ್ಕವಿದೆ. ಉಳಿದವರಿಗೆ 750 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ sac.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಗಮನವಿಟ್ಟು ಓದಿಕೊಂಡು ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಆನ್ ಲೈನ್ ಅರ್ಜಿಯನ್ನು ಭರ್ತಿ ಮಾಡುವ ಜತೆಗೆ ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ : ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ತಂದೆ-ಮಗ ಪಾರು



















