ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರದ (ಇಸ್ರೋ) ವಿಕ್ರಮ್ ಸಾರಾಭಾಯಿ ಬಾಹ್ಯಾಕಾಶ ಕೇಂದ್ರದಲ್ಲಿ ಖಾಲಿ ಇರುವ 39 ಹುದ್ದೆಗಳ ನೇಮಕಾತಿಗಾಗಿ (ISRO VSSC Recruitment 2025) ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಸಿಸ್ಟಂಟ್, ಲೈಟ್ ವೆಹಿಕಲ್ ಡ್ರೈವರ್ ಸೇರಿ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅಕ್ಟೋಬರ್ 8 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಇಸ್ರೋದ ವಿಕ್ರಮ್ ಸಾರಾಭಾಯಿ ಬಾಹ್ಯಾಕಾಶ ಕೇಂದ್ರ
ಒಟ್ಟು ಹುದ್ದೆಗಳು: 39
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 8
ಎಸ್ಸೆಸ್ಸೆಲ್ಸಿ ಉತ್ತೀರ್ಣರಾದವರು, ವಾಹನ ಚಾಲನಾ ಪರವಾನಗಿ ಇರುವವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಅನುಭವ ಇರುವವರಿಗೆ ಆದ್ಯತೆ ನೀಡಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 19,900 ರೂಪಾಯಿಯಿಂದ 81,100 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಯಾವ ಹುದ್ದೆ ಎಷ್ಟು ಖಾಲಿ?
ಅಸಿಸ್ಟಂಟ್- 02
ಲೈಟ್ ವೆಹಿಕಲ್ ಡ್ರೈವರ್ ಎ- 27
ಹೆವಿ ವೆಹಿಕಲ್ ಡ್ರೈವರ್ ಎ- 05
ಫೈರ್ ಮ್ಯಾನ್ ಎ- 03
ಕುಕ್- 02
ಲಿಖಿತ ಪರೀಕ್ಷೆ, ಕೌಶಲ ಪರೀಕ್ಷೆ, ದೈಹಿಕ ಸಾಮರ್ಥ್ಯ, ಸಂದರ್ಶನ ಹಾಗೂ ದಾಖಲೆ ಪರಿಶೀಲನೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವವರು ಮೊದಲಿಗೆ vssc.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಕರಿಯರ್ ವಿಭಾಗದಲ್ಲಿ ಅಧಿಸೂಚನೆಯನ್ನು ಓದಿದ ಬಳಿಕ, ಅರ್ಜಿ ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳೊಂದಿಗೆ ಅರ್ಜಿಗಳನ್ನು ಸಲ್ಲಿಸಬೇಕು.



















