ಬೆಂಗಳೂರು: ಅಸಮಾನತೆ ಹೋಗಲಾಡಿಸದೆ ಹೋದರೆ ಸ್ವಾತಂತ್ರ್ಯ ಸಿಕ್ಕಿದ್ದು ಸಾರ್ಥಕವಾಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಂವಿಧಾನ ಎಷ್ಟೇ ಚೆನ್ನಾಗಿದ್ದರೂ ಒಳ್ಳೆಯವರ ಕೈಯಲ್ಲಿ ಇದ್ದರೆ ಒಳ್ಳೆಯದಾಗುತ್ತದೆ. ಕೆಟ್ಟವರ ಕೈಯಲ್ಲಿ ಇದ್ದರೆ ಕೆಟ್ಟದಾಗುತ್ತದೆ ಎಂದಿದ್ದಾರೆ ಎಂದು ಅಂಬೇಡ್ಕರ್ ಹೇಳಿದ್ದರು. ಹೀಗಾಗಿ ಸಂವಿಧಾನ ಒಳ್ಳೆಯವರ ಕೈಯಲ್ಲಿ ಇರಬೇಕು ಎಂದಿದ್ದಾರೆ.
ದೇಶದಲ್ಲಿ ಸಂವಿಧಾನ ಅಂಗೀಕಾರಗೊಂಡು 50 ವರ್ಷ ಕಳೆದಿವೆ. ಈ ದಿನವನ್ನು ನಾವು ಸಂವಿಧಾನ ದಿನ ಎಂದು ಆಚರಣೆ ಮಾಡುತ್ತಿದ್ದೇವೆ. ಕೇಂದ್ರ, ರಾಜ್ಯ ಮತ್ತು ಸ್ಥಳೀಯ ಸಂಸ್ಥೆಗಳು ಸಂವಿಧಾನದಡಿಯಲ್ಲೇ ನಡೆಯಬೇಕು. ಶಾಲಾ-ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆ ಓದುವುದನ್ನು ಕಡ್ಡಾಯ ಮಾಡಿದ್ದೇವೆ ಎಂದಿದ್ದಾರೆ.
ಸಂವಿಧಾನ ಬದಲಾವಣೆ ಆಗಬಾರದೆಂದು ಹೋರಾಟ ಮಾಡುತ್ತಿದ್ದೇವೆ. ದೀರ್ಘಕಾಲದ ಶಾಂತಿಯಲ್ಲಿರುವ ಸಂವಿಧಾನ ಎಂದರೆ ಅದು ಭಾರತದ ಸಂವಿಧಾನ. ಅಸಮಾನತೆ ಹೋಗಲಾಡಿಸದೆ ಹೋದರೆ ಸ್ವಾತಂತ್ರ್ಯ ಸಿಕ್ಕಿದ್ದು ಸಾರ್ಥಕವಾಗಲ್ಲ. ರಾಜಕೀಯ ಸ್ವಾತಂತ್ರ್ಯದ ಜೊತೆಗೆ ಸಾಮಾಜಿಕ ಸ್ವಾತಂತ್ರ್ಯ ಕೊಡುವ ಕೆಲಸ ಆಗಬೇಕು. ಸ್ವಾತಂತ್ರ್ಯ, ಸಮಾನತೆ, ನ್ಯಾಯ ಮತ್ತು ಬ್ರಾತೃತ್ವ ಬಗ್ಗೆ ಅಂಬೇಡ್ಕರ್ ಸ್ಪಷ್ಟವಾಗಿ ಹೇಳಿದ್ದಾರೆ. ಅದೇ ರೀತಿ ನಾವೆಲ್ಲ ಬದುಕಬೇಕು ಎಂದಿದ್ದಾರೆ.