ಬೆಂಗಳೂರು: ಬಿಜೆಪಿಯವರು, ಐವತ್ತು ಜನ ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂ. ಆಮಿಷ ಒಡ್ಡಿರುವುದು ನಿಜ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ವಿಧಾನಸೌಧ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಸಮರ್ಥಿಸಿಕೊಂಡು, ಬಿಜೆಪಿಯವರು ಆಮಿಷವೊಡ್ಡಿದ್ದು ನಿಜ ಎಂದಿದ್ದಾರೆ.
ಆಪರೇಷನ್ ಕಮಲದ ಬಗ್ಗೆ ನಮ್ಮ ಶಾಸಕರು ನಮಗೆ ಹೇಳಿದ್ದಾರೆ. ಈ ವಿಚಾರವನ್ನು ಕೆಲವರು ಬಂದು ಮುಖ್ಯಮಂತ್ರಿಯ ಹತ್ತಿರವೂ ಹೇಳಿದ್ದಾರೆ. ಈ ಸಂಗತಿಯನ್ನು ಸಿಎಂ ಮಾಧ್ಯಮದ ಮುಂದೆ ಹೇಳಿದ್ದಾರೆ. ಸರ್ಕಾರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಪಕ್ಷದ 50 ಶಾಸಕರಿಗೆ ತಲಾ 50 ಕೋಟಿ ರೂ.ನಂತೆ ಬಿಜೆಪಿಯವರು ಆಮಿಷವೊಡ್ಡಿದ್ದು, ನಿಜಕ್ಕೂ ಸತ್ಯ ಎಂದು ಡಿಕೆಶಿ ಹೇಳಿದ್ದಾರೆ.