ಬೆಂಗಳೂರು : ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಒಡೆತನದ ಐಷಾರಾಮಿ ಪಬ್ ಮೇಲೆ ಬೆಂಗಳೂರಿನಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನಲ್ಲಿರುವ ಜನಪ್ರಿಯ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ ನಡೆದಿದೆ. ಈ ದಾಳಿಯ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ಈಗಾಗಲೇ ಹಲವು ಪ್ರಕರಣಗಳಲ್ಲಿ ವಿಚಾರಣೆಯನ್ನು ಎದುರಿಸುತ್ತಿದ್ದಾರೆ.
ಈ ಐಟಿ ದಾಳಿಯು ಆ ಹಿಂದಿನ ಪ್ರಕರಣಗಳ ಮುಂದುವರಿದ ಭಾಗವೇ ಅಥವಾ ಪಬ್‌ಗೆ ಸಂಬಂಧಿಸಿದ ಇತರ ವಿವಾದಗಳಿಗೆ ಸಂಬಂಧಿಸಿದ್ದೇ ಎಂಬ ಪ್ರಶ್ನೆಗಳು ಮೂಡಿವೆ. ಬ್ಯಾಸ್ಟಿಯನ್ ಪಬ್ ಬೆಂಗಳೂರಿನ ಅತ್ಯಂತ ದುಬಾರಿ ಪಬ್‌ಗಳಲ್ಲಿ ಒಂದಾಗಿದೆ. ಐಟಿ ಅಧಿಕಾರಿಗಳು ಸದ್ಯ ಪಬ್‌ನಲ್ಲಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಇದನ್ನೂ ಓದಿ : ‘Chinni Love u… u must love me’.. ಇನ್ಸ್ಪೆಕ್ಟರ್ ಹಿಂದೆ ಬಿದ್ದ ಮಹಿಳೆಯ ಅತಿರೇಕದ ಪ್ರೇಮ ಕಾಟ.. ಮುಂದೇನಾಯ್ತು?



















