ಬೆಂಗಳೂರು: ದೇಶದ ಸೇನೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ದೊರಕಿದೆ. ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಪಡೆಯಲ್ಲಿ (ITBP Recruitment 2025) ಖಾಲಿ ಇರುವ 7 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಡೆಪ್ಯೂಟಿ ಜಡ್ಜ್ ಅಟಾರ್ನಿ ಜನರಲ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಪಡೆ (ITBP)
ಒಟ್ಟು ಹುದ್ದೆಗಳು: 7
ಹುದ್ದೆಗಳ ಹೆಸರು: ಡೆಪ್ಯೂಟಿ ಜಡ್ಜ್ ಅಟಾರ್ನಿ ಜನರಲ್
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್ 31
ಎಸ್ಸಿ, ಎಸ್ಟಿ, ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ. ಜನರಲ್, ಒಬಿಸಿ ಸಮುದಾಯದವರಿಗೆ 100 ರೂಪಾಯಿ ಅರ್ಜಿ ಶುಲ್ಕವಿದೆ. ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಹಾಗೂ ಪ್ರಾಯೋಗಿಕ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 2.08 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ itbpolice.nic.in ಗೆ ಭೇಟಿ ನೀಡಬೇಕು
- ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
- ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು.
- ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಬೇಕು
_ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು
ಇದನ್ನೂ ಓದಿ: ಸಾಲಗಾರರಿಗೆ ಗುಡ್ ನ್ಯೂಸ್ : ರೆಪೊ ದರದಲ್ಲಿ 25 ಬೇಸಿಸ್ ಪಾಯಿಂಟ್ ಇಳಿಸಿದ RBI



















