ಬೆಂಗಳೂರು: ಕೇಂದ್ರ ಸರ್ಕಾರದ ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (Indian Telephone Industries Limited) ಸಂಸ್ಥೆಯಲ್ಲಿ ಖಾಲಿ ಇರುವ 7 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಜನರಲ್ ಮ್ಯಾನೇಜರ್, ಎಕ್ಸಿಕ್ಯೂಟಿವ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಸೆಪ್ಟೆಂಬರ್ 18 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್
ಒಟ್ಟು ಹುದ್ದೆಗಳು: 07
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಸೆಪ್ಟೆಂಬರ್ 18
ಹುದ್ದೆಗಳ ಹೆಸರು: ಜನರಲ್ ಮ್ಯಾನೇಜರ್, ಎಕ್ಸಿಕ್ಯೂಟಿವ್ ಪೋಸ್ಟ್
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿ.ಇ, ಬಿ.ಟೆಕ್, ಪದವಿ, ಎಂಬಿಎ, ಎಂಎಸ್ ಡಬ್ಲ್ಯೂ, ಸಿಎ, ಸಿಎಸ್ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. 30ರಿಂದ 56 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಒಬಿಸಿಯವರಿಗೆ 3 ವರ್ಷ ಹಾಗೂ ಎಸ್ಸಿ, ಎಸ್ಟಿ ಸಮುದಾಯದವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ದೆಹಲಿ, ಬೆಂಗಳೂರು, ಇಟಾನಗರ ಹಾಗೂ ಸೋಲನ್ ನಲ್ಲಿರುವ ಕಚೇರಿಗಳಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಅರ್ಜಿಗಳ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ 26,500 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು itiltd.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.



















