ಕಲಬುರಗಿ: ಕಾಂಗ್ರೆಸ್ ಯಾವತ್ತೂ ಷಡ್ಯಂತ್ರ ಮಾಡುವುದಿಲ್ಲ. ನಮಗೆ ಅದರ ಅವಶ್ಯಕತೆ ಇಲ್ಲ. ನಾವು ಬಿಜೆಪಿಯವರಂತೆ ದ್ವೇಷ ಮಾಡಲು ಹೊರಟರೆ, ಬಿಜೆಪಿಯವರಿಗೆ ಜೈಲು ಸಾಕಾಗಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡುಗಿದ್ದಾರೆ.
ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಷಡ್ಯಂತ್ರದಿಂದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಬಂಧಿಸಲಾಗಿದೆ ಎಂಬ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ಬಿಜೆಪಿ ಅವರಂತೆ ನಾವು ದ್ವೇಷ ರಾಜಕಾರಣ ಮಾಡುವುದಿಲ್ಲ. ನಾವು ಅವರಂತೆ ಮಾಡಲು ಹೊರಟರೆ, ಬಿಜೆಪಿಯವರಿಗೆ ಜೈಲುಗಳು ಸಾಕಾಗುವುದಿಲ್ಲ ಎಂದು ಗುಡುಗಿದ್ದಾರೆ.
ರಾಜಕಾರಣಿಗಳು ಅಂದ ಮೇಲೆ ನಮ್ಮನ್ನು ಜನರು ಅನುಕರಣೆ ಮಾಡುತ್ತಿರುತ್ತಾರೆ. ಹೀಗಾಗಿ ನಾವು ನಮ್ಮ ಜವಾಬ್ದಾರಿ ಅರಿತು ಮಾತನಾಡಬೇಕು. ಹೆಣ್ಣು ಮಕ್ಕಳ ಬಗ್ಗೆ ನಾಲಿಗೆ ಬಿಗಿ ಹಿಡಿದು ಮಾತನಾಡಬೇಕು ಎಂದು ಕಿವಿ ಮಾತು ಹೇಳಿದ್ದಾರೆ.