ಬೆಳಗಾವಿ: ಗಾಂಜಾಕ್ಕಾಗಿ (Drug) ಬೆಳಗಾವಿ ಕೇಂದ್ರ ಕಾರಾಗೃಹದ ಜೈಲಿನ (Hindalaga) ಕೈದಿಯೊಬ್ಬಾತ ಜೈಲು ಸಿಬ್ಬಂದಿಯ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಹಿಂಜಲಗಾ ಜೈಲಿನಲ್ಲಿ ಈ ಘಟನೆ ನಡೆದಿದೆ. ಸಹಾಯಕ ಜೈಲರ್ (Jailar)ಜಿ.ಆರ್. ಕಾಂಬಳೆ ಅವರ ಮೇಲೆ ಕೈದಿ ವಿಚಾರಣಾಧೀನ ಕೈದಿ ಶಾಹೀದ್ ಖುರೇಶಿ ಹಲ್ಲೆ ಮಾಡಿದ್ದಾನೆ ಎನ್ನಲಾಗಿದ್ದು, ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಘಟನೆಯಲ್ಲಿ ಜೈಲರ್ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಧಿವೇಶನದ ಹಿನ್ನೆಲೆಯಲ್ಲಿ ಈ ಪ್ರಕರಣ ಮುಚ್ಚಿ ಹಾಕಲು ಪೊಲೀಸರು ಯತ್ನಿಸಿದ್ದರು. ಆದರೆ, ಜೈಲರ್ ಗಂಭೀರವಾಗಿ ಗಾಯಗೊಂಡಿದ್ದರಿಂದಾಗಿ ಈ ಘಟನೆ ಬೆಳಕಿಗೆ ಬಂದಿದೆ.
ಜೈಲಿನಲ್ಲಿ ಪ್ಲಾಸ್ಟಿಕ್ ಸುತ್ತಿದ ಪ್ಯಾಕೇಟ್ ಒಂದು ಸಿಕ್ಕಿದೆ. ಅದನ್ನು ನೋಡಿದ ಜೈಲರ್ ಕೂಡಲೇ ಮುಖ್ಯ ಅಧೀಕ್ಷಕರಿಗೆ ವರದಿ ಸಲ್ಲಿಸಲು ತೆರಳುತ್ತಿದ್ದರು. ಆಗ ಕೈದಿ ಹಲ್ಲೆ ಮಾಡಿದ್ದಾನೆ. ಆನಂತರ ಅವರ ಕೈಯಲ್ಲಿದ್ದ ಪ್ಯಾಕೇಟ್ ಕಸಿದುಕೊಂಡಿದ್ದಾನೆ ಎನ್ನಲಾಗಿದೆ.