ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ನಲ್ಲಿ ಭಾರತೀಯ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಭರ್ಜರಿ ಶತಕ ಸಿಡಿಸಿದ್ದಾರೆ.
ಪಂದ್ಯದ ದ್ವಿತೀಯ ಇನಿಂಗ್ಸ್ನಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಜೈಸ್ವಾಲ್ 205 ಎಸೆತಗಳಲ್ಲಿ ಶತಕ ಸಿಡಿಸಿದ ಸಾಧನೆ ಮಾಡಿದ್ದಾರೆ. ಈ ಮೂಲಕ ಯಶಸ್ವಿ ಜೈಸ್ವಾಲ್ 4ನೇ ಶತಕ ಸಿಡಿಸಿದ ಸಾಧನೆ ಮಾಡಿದ್ದಾರೆ. ವಿದೇಶಿ ಪಿಚ್ ನಲ್ಲಿ ಜೈಸ್ವಾಲ್ ಬ್ಯಾಟ್ನಿಂದ ಮೂಡಿಬಂದಿರುವ ದ್ವಿತೀಯ ಶತಕವಾಗಿದೆ. ಆಸ್ಟ್ರೇಲಿಯಾ ವಿರುದ್ಧ ಇದೇ ಮೊದಲ ಬಾರಿಗೆ ಶತಕ ಸಿಡಿಸಿದ ಸಾಧನೆ ಮಾಡಿದ್ದಾರೆ.
ಇದಕ್ಕೂ ಮೊದಲು ಯಶಸ್ವಿ ಜೈಸ್ವಾಲ್ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ನಲ್ಲಿ 171 ರನ್ ಗಳಿಸಿದ್ದರು. ನಂತರ ಇಂಗ್ಲೆಂಡ್ ವಿರುದ್ಧ 209 ಹಾಗೂ 214 ರನ್ ಗಳ ಎರಡು ದ್ವಿಶತಕ ಸಿಡಿಸಿದ ಸಾಧನೆ ಮಾಡಿದ್ದರು. ಈಗ ಆಸ್ಟ್ರೇಲಿಯಾ ವಿರುದ್ಧ ಶತಕ ಸಿಡಿಸಿದ್ದಾರೆ. ಈ ಶತಕದ ಮೂಲಕ ಆಸೀಸ್ ಪಿಚ್ನಲ್ಲಿ ಈ ಸಾಧನೆ ಮಾಡಿದ ಅತ್ಯಂತ ಕಿರಿಯ ಬ್ಯಾಟರ್ಗಳ ಪಟ್ಟಿಯಲ್ಲಿ ಯಶಸ್ವಿ ಜೈಸ್ವಾಲ್ ಸ್ಥಾನ ಪಡೆದಿದ್ದಾರೆ.
ಯಶಸ್ವಿ ಜೈಸ್ವಾಲ್ ಅವರ ಶತಕ ಹಾಗೂ ಕೆಎಲ್ ರಾಹುಲ್ (77) ಅವರ ಅರ್ಧಶತಕದ ನೆರವಿನಿಂದ ಭಾರತ ತಂಡ 1 ವಿಕೆಟ್ ಕಳೆದುಕೊಂಡು 253 ರನ್ ಗಳಿಸಿ ಬ್ಯಾಟಿಂಗ್ ನಡೆಸುತ್ತಿದೆ.