ದೇಶದಲ್ಲಿ ದೇಶೀಯ ಕ್ರಿಕೆಟ್ ಟೂರ್ನಿ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ನಡೆಯುತ್ತಿದ್ದು, ಜಮ್ಮು ಮತ್ತು ಕಾಶ್ಮೀರ ತಂಡವು ಕೇವಲ 28 ಎಸೆತಗಳಲ್ಲಿ ಗೆಲುವಿನ ನಗೆ ಬೀರಿದೆ.
ಅರುಣಾಚಲ ಪ್ರದೇಶದ ವಿರುದ್ಧ ಜಮ್ಮು ಕಾಶ್ಮೀರ ತಂಡ ಈ ರೀತಿ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಜಮ್ಮು ಮತ್ತು ಕಾಶ್ಮೀರ ತಂಡ 10 ವಿಕೆಟ್‌ಗಳ ಜಯ ಸಾಧಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಅರುಣಾಚಲ ಪ್ರದೇಶ ತಂಡ ಕೇವಲ 9.1 ಓವರ್ ಗಳಲ್ಲಿ 32 ರನ್ ಗಳಿಗೆ ಆಲೌಟ್ ಆಗಿತ್ತು. ಆನಂತರ ಗುರಿ ಬೆನ್ನಟ್ಟಿದ ಜಮ್ಮು ಕಾಶ್ಮೀರ ತಂಡ 18 ಎಸೆತಗಳಲ್ಲಿ ಪಂದ್ಯ ಗೆದ್ದಿದೆ.
ಈ ಮೂಲಕ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಇತಿಹಾಸದಲೇ ಅತಿ ಕಡಿಮೆ ಸ್ಕೋರ್ ದಾಖಲಿಸಿದ ಎರಡನೇ ತಂಡ ಎನಿಸಿಕೊಂಡಿದೆ. ಇದಕ್ಕೂ ಮುನ್ನ 2009ರಲ್ಲಿ ಜಾರ್ಖಂಡ್ ವಿರುದ್ಧ ತ್ರಿಪುರಾ ತಂಡ ಕೇವಲ 30 ರನ್‌ಗಳಿಗೆ ಆಲೌಟ್ ಆಗಿತ್ತು. ಗುರಿ ಬೆನ್ನಟ್ಟಿದ ಜಮ್ಮು ಮತ್ತು ಕಾಶ್ಮೀರ ತಂಡ ಹೆಚ್ಚು ಸಮಯ ತೆಗೆದುಕೊಳ್ಳದೆ ಕೇವಲ 3 ಓವರ್ ಗಳಲ್ಲಿ ಪಂದ್ಯವನ್ನು ಮುಗಿಸಿತು. ತಂಡದ ಪರ ಯುದ್ಧವೀರ್ ಸಿಂಗ್ 11 ಎಸೆತಗಳಲ್ಲಿ ಅಜೇಯ 21 ರನ್ ಗಳಿಸಿದರೆ, ಕಮ್ರಾನ್ ಇಕ್ಬಾಲ್ 10 ರನ್ ಗಳಿಸಿ ಅಜೇಯರಾಗಿ ಉಳಿದರು.