ಪಕ್ಷೇತರ ಹಾಗೂ ಬಿಜೆಪಿ ಬೆಂಬಲಿತ ಶಾಸಕ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ ಸ್ಪೀಕರ್ ಆದೇಶ ಹೊರಡಿಸಿದ್ದಾರೆ.
ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ. ಹೈದ್ರಾಬಾದ್ ಸಿಬಿಐ ವಿಶೇಷ ಕೋರ್ಟ್ ನಿಂದ 7 ವರ್ಷ ಶಿಕ್ಷೆಗೆ ಗುರಿಯಾಗಿರುವ ಹಿನ್ನೆಲೆಯಲ್ಲಿ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಲಾಗಿದೆ.
ಈಗಾಗಲೇ ಆಂಧ್ರಪ್ರದೇಶದ ಹೈಕೋರ್ಟ್ ನಲ್ಲಿ ಜನಾರ್ದನ ರೆಡ್ಡಿ ಹೈಕೋರ್ಟ್ ನಲ್ಲಿ ಬೇಲ್ ಗೆ ಅರ್ಜಿ ಸಲ್ಲಿಸಿದ್ದಾರೆ. ಸಿಬಿಐ ಕೋರ್ಟ್ ಆದೇಶ ಆಧರಿಸಿ ಶಾಸಕ ಸ್ಥಾನದಿಂದ ವಜಾಗೊಳಿಸಿ ವಿಧಾನ ಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ಆದೇಶ ಹೊರಡಿಸಿದ್ದಾರೆ.