ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕ ಗಾಲಿ ಜನಾರ್ದನ ರೆಡ್ಡಿ ಜೈಲು ಪಾಲಾಗಿದ್ದಾರೆ. ಅವರ ಪತ್ನಿ ಅರುಣಾ ರೆಡ್ಡಿ ಟೆಂಪಲ್ ರನ್ ನಡೆಸುತ್ತಿದ್ದಾರೆ.
ಅರುಣಾ ರೆಡ್ಡಿ ಅವರು ವಿವಿಧ ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ನಡೆಸುತ್ತಿದ್ದಾರೆ. ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ನಾಂಪಲ್ಲಿ ಸಿಬಿಐ ವಿಶೇಷ ನ್ಯಾಯಾಲಯ ಜನಾರ್ದನ್ ರೆಡ್ಡಿ ಅವರನ್ನು ದೋಷಿ ಎಂದು ಆದೇಶ ನೀಡಿದೆ. ಅಲ್ಲದೇ, 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಈಗಾಗಲೇ ಸಿಬಿಐ ನ್ಯಾಯಾಲಯ ನೀಡಿರುವ ತೀರ್ಪು ಪ್ರಶ್ನಿಸಿ ರೆಡ್ಡಿ ಪರ ವಕೀಲರು ಹೈಕೋರ್ಟ್ ಮೊರೆ ಹೋಗಿದ್ದಾರೆ. ಜೂನ್. 10ರಂದು ಈ ಪ್ರಕರಣದ ಅರ್ಜಿ ವಿಚಾರಣೆಗೆ ಬರಲಿದೆ. ಈ ಹಿನ್ನೆಲೆಯಲ್ಲಿ ಅರುಣಾ ರೆಡ್ಡಿ ವಿಶೇಷ ಪೂಜೆ ನಡೆಸುತ್ತಿದ್ದಾರೆ. ವಿವಿಧ ರಾಜ್ಯಗಳಲ್ಲಿನ ಪ್ರಸಿದ್ಧ ದೇವಾಲಯಗಳಿಗೂ ಅವರು ಭೇಟಿ ನೀಡುತ್ತಿದ್ದಾರೆ.