ಬೆಂಗಳೂರು: ಭಾರತ ತಂಡದ ಪ್ರಮುಖ ಬೌಲರ್ ವಜಸ್‌ಪ್ರೀತ್ ಬುಮ್ರಾ(Jasprit Bumrah) ವಿಚಾರದಲ್ಲಿ ಅಭಿಮಾನಿಗಳಿಗೆ ಸಂತಸದ ಸುದ್ದಿ ಬಂದಿದೆ. ಗಾಯದ ಕಾರಣಕ್ಕೆ ಐಸಿಸಿ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗೆ ಉಳಿದಿದ್ದ ಅವರು ಇದೀಗ ಚೇತೆರಿಸಿಕೊಂಡು ಕ್ರಿಕೆಟ್ ಅಭ್ಯಾಸ ಆರಂಭಿಸಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿ ಸಂದರ್ಭದಲ್ಲಿ ಬೆನ್ನು ನೋವಿನ ಸಮಸ್ಯೆಗೆ ಒಳಗಾದ ಜಸ್ಪ್ರಿತ್ ಬುಮ್ರಾ ಐಸಿಸಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯಿಂದ ಹೊರಬಿದ್ದಿದ್ದರು. ಅವರ ಸ್ಥಾನಕ್ಕೆ ಹರ್ಷಿತ್ ರಾಣಾ ಆಯ್ಕೆಯಾಗಿದ್ದರು. ರಾಣಾ ಎಲ್ಲ ಪಂದ್ಯಗಳಲ್ಲಿ ಆಡಿದ್ದಾರೆ. ಬುಮ್ರಾ ಐಪಿಎಲ್ ಆರಂಭಕ್ಕೂ ಮುನ್ನ ಅಭ್ಯಾಸ ಆರಂಭಿಸಿದ್ದಾರೆ.
ಬುಮ್ರಾ ಇದುವರೆಗೆ ಬೆಂಗಳೂರಿನ ಎಸ್‌ಸಿಎಯಲ್ಲಿ ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಂಡಿದ್ದರು. ಇದೀಗ ಬೌಲಿಂಗ್ ಅಭ್ಯಾಸ ಶುರುವಿಟ್ಟುಕೊಂಡಿದ್ದಾರೆ. ಬುಮ್ರಾ ಬೌಲಿಂಗ್ ನಡೆಸುವ ವಿಡಿಯೊವನ್ನು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಬುಮ್ರಾ ಬೌಲಿಂಗ್ ಅಭ್ಯಾಸ ಕಂಡ ಟೀಮ್ ಇಂಡಿಯಾ ಅಭಿಮಾನಿಗಳು ಖುಷಿ ಪಟ್ಟಿದ್ದಾರೆ. ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಪಂದ್ಯದ ವೇಳೆ ತಂಡ ಸೇರಿಕೊಳ್ಳಿ ಎಂದು ಸಹಲೆ ಹ
ಭಾರತ ತಂಡ ಸೇರಿಕೊಳ್ಳಿ ಎಂದು ಕಾಮೆಂಟ್ ಮಾಡಿದ್ದಾರೆ. ಕಳೆದ ವಾರ ಪಾಕ್ ವಿರುದ್ಧದ ಪಂದ್ಯದ ವೇಳೆ ಬುಮ್ರಾ ಪ್ರೇಕ್ಷಕರ ಗ್ಯಾಲರಿಯಲ್ಲಿ ಕಾಣಿಸಿಕೊಂಡಿದ್ದರು. ಪಂದ್ಯ ಆರಂಭಕ್ಕೂ ಮುನ್ನ ಬುಮ್ರಾ ಈ ಬಾರಿಯ ಐಸಿಸಿ ಪ್ರಶಸ್ತಿಗಳನ್ನು ಸ್ವೀಕರಿಸಿದ್ದರು. ಐಸಿಸಿ ಅಧ್ಯಕ್ಷ ಜಯ್ ಶಾ ಅವರಿಂದ ಪ್ರಶಸ್ತಿ ಸ್ವೀಕರಿಸಿದ್ದರು.
ಬುಮ್ರಾ ಮಾ.22ರಿಂದ ಆರಂಭವಾಗಲಿರುವ ಐಪಿಎಲ್‌ನಲ್ಲಿ ಕಣಕ್ಕಿಳಿಯುವ ಸಾಧ್ಯತೆ ಇದೆ. ಮುಂಬೈ ತಂಡ ಮಾ.23 ರಂದು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆಡುವ ಮೂಲಕ ತನ್ನ ಅಭಿಯಾನ ಆರಂಭಿಸಲಿದೆ.
5 ಬಾರಿಯ ಐಪಿಎಲ್ ಚಾಂಪಿಯನ್ ಎನಿಸಿಕೊಂಡಿರುವ ಮುಂಬೈ ಕಳೆದ ಬಾರಿಯ ಆವೃತ್ತಿಯಲ್ಲಿ ಕೊನೇ ಸ್ಥಾನ ಪಡೆದುಕೊಂಡಿತ್ತು. ಹಾರ್ದಿಕ್ ಪಾಂಡ್ಯ ತಂಡವನ್ನು ಮುನ್ನಡೆಸಿದ್ದರು. ಇದು ಐಪಿಎಲ್ ಇತಿಹಾಸದಲ್ಲಿ ಚರ್ಚೆಯ ವಿಷಯವಾಗಿತ್ತು.
ಮುಂಬೈ ತಂಡ
ಜಸ್‌ಪ್ರೀತ್ ಬುಮ್ರಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರೋಹಿತ್ ಶರ್ಮಾ, ತಿಲಕ್ ವರ್ಮಾ, ಟ್ರೆಂಟ್ ಬೌಲ್ಟ್, ನಮನ್ ಧೀರ್, ರಾಬಿನ್ ಮಿಂಜ್, ಕರ್ಣ್ ಶರ್ಮ, ದೀಪಕ್ ಚಹರ್ ,ವಿಲ್ ಜಾಕ್ಸ್ , ಮಿಚೆಲ್ ಸ್ಯಾಂಟ್ನರ್ , ರ್ಯಾನ್ ರಿಕೆಲ್ಟನ್ , ಅಶ್ವನಿ ಕುಮಾರ್, ರೀಸ್ ಟಾಪ್ಲೆ, ಕೆಎಲ್ ಶ್ರೀಜಿತ್ , ರಾಜ್ ಅಂಗದ್ ಬಾವ , ಸತ್ಯನಾರಾಯಣ ರಾಜು, ಬೆವನ್ ಜೇಕಬ್ಸ್, ವಿಘ್ನೇಶ್ ಪುಥರ್, ಅರ್ಜುನ್ ತೆಂಡೂಲ್ಕರ್, ಲಿಜಾಡ್ ವಿಲಿಯಮ್ಸ್.