ನವದೆಹಲಿ : ದೇಶದ ವಿಶ್ವವಿದ್ಯಾಲಯಗಳಲ್ಲಿ ಪಿಎಚ್.ಡಿ ಮಾಡುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ನವದೆಹಲಿಯ ‘ಜವಾಹರಲಾಲ್ ನೆಹರು ಮೆಮೋರಿಯಲ್ ಫಂಡ್‘ (JNMF) ವತಿಯಿಂದ 2026ನೇ ಸಾಲಿನಲ್ಲಿ ಪಿಎಚ್.ಡಿ ಅಧ್ಯಯನ ಮಾಡುತ್ತಿರುವವರಿಗೆ (Ph.D. Scholarships) ವಿದ್ಯಾರ್ಥಿವೇತನ ಘೋಷಣೆ ಮಾಡಲಾಗಿದೆ. ಪಿಎಚ್.ಡಿ ಅಧ್ಯಯ ಮಾಡುತ್ತಿರುವವರು ಅರ್ಜಿ ಸಲ್ಲಿಸಬಹುದಾಗಿದೆ.
ವಿಶೇಷ ಸ್ಕಾಲರ್ ಶಿಪ್ ಗಾಗಿ ಭಾರತೀಯ ಪ್ರಜೆಗಳಿಗೆ ಹಾಗೂ ಇತರೆ ಏಷ್ಯಾದ ದೇಶಗಳ ಸಂಶೋಧನಾರ್ಥಿಗಳಿಗೂ ಅವಕಾಶ ನೀಡಲಾಗಿದೆ. ಒಟ್ಟು 20 ಸ್ಕಾಲರ್ ಶಿಪ್ ಗಳನ್ನು ನೀಡಲಾಗುತ್ತಿದ್ದು, ಇದರಲ್ಲಿ 18 ಭಾರತೀಯರಿಗೂ ಮತ್ತು 2 ಏಷ್ಯಾದ ವಿದ್ಯಾರ್ಥಿಗಳಿಗೆ ಲಭ್ಯವಿರುತ್ತವೆ. ಭಾರತೀಯ ಇತಿಹಾಸ ಮತ್ತು ನಾಗರಿಕತೆ, ಸಮಾಜಶಾಸ್ತ್ರ, ಧರ್ಮ ಮತ್ತು ಸಂಸ್ಕೃತಿಯ ತುಲನಾತ್ಮಕ ಅಧ್ಯಯನ, ಪರಿಸರ ಅಧ್ಯಯನ ಹಾಗೂ ಅರ್ಥಶಾಸ್ತ್ರ ವಿಷಯಗಳಲ್ಲಿ ಪಿಎಚ್.ಡಿ ಮಾಡುತ್ತಿರುವವರು ಅರ್ಜಿ ಸಲ್ಲಿಸಬಹುದು.
ಪಿಎಚ್.ಡಿ ಅಧ್ಯಯನ ಮಾಡುತ್ತಿರುವವರಿಗೆ ಮೊದಲ 2 ವರ್ಷಗಳವರೆಗೆ ಮಾಸಿಕ 18 ಸಾವಿರ ರೂಪಾಯಿ ಸ್ಟೈಪೆಂಡ್ ನೀಡಲಾಗುತ್ತದೆ. ಹಾಗೆಯೇ, ಶೈಕ್ಷಣಿಕ ವೆಚ್ಚಗಳಿಗಾಗಿ ಪ್ರತಿ ವರ್ಷ 15 ಸಾವಿರ ರೂಪಾಯಿ ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಹತೆಗಳೇನು?
• ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಪೂರ್ಣಾವಧಿ ಪಿಎಚ್.ಡಿ (Full-time Ph.D.) ಅಧ್ಯಯನ ಮಾಡುತ್ತಿರಬೇಕು.
• ಸ್ನಾತಕೋತ್ತರ ಮತ್ತು ಪದವಿ ಹಂತದಲ್ಲಿ ಕನಿಷ್ಠ ಶೇ.60ರಷ್ಟು ಅಂಕಗಳನ್ನು ಗಳಿಸಿರಬೇಕು.
• ಅಭ್ಯರ್ಥಿಗಳ ವಯಸ್ಸು 35 ವರ್ಷಗಳಿಗಿಂತ ಕಡಿಮೆ ಇರಬೇಕು. ನಿಯಮಾನುಸಾರ ಎಸ್ಸಿ, ಎಸ್ಟಿ, ಒಬಿಸಿ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
ಅರ್ಜಿ ಸಲ್ಲಿಕೆ ಹೇಗೆ?
ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ https://www.jnmf.in/saform.html ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿ ಹಾಗೂ ಅಗತ್ಯ ದಾಖಲೆಗಳನ್ನು 100 ರೂ. ಡಿಡಿಯೊಂದಿಗೆ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
Administrative Secretary,
Jawaharlal Nehru Memorial Fund,
Teen Murti House, New Delhi -110011
ಇದನ್ನೂ ಓದಿ : ಸ್ಟೈಪೆಂಡ್ ಜತೆಗೆ ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಇಂಟರ್ನ್‌ಶಿಪ್ ಅವಕಾಶ : ಇಲ್ಲಿದೆ ಡಿಟೇಲ್ಸ್



















