ಮಂಡ್ಯ: ಮಾಜಿ ಪ್ರಧಾನಿ ದೇವೇಗೌಡರ ತವರು ಜಿಲ್ಲೆಯಲ್ಲಿ ಶಕ್ತಿ ಪ್ರದರ್ಶನ ನಡೆಸಿದ ಕಾಂಗ್ರೆಸ್ ಗೆ ಠಕ್ಕರ್ ಕೊಡಲು ಜೆಡಿಎಸ್ ಸಿದ್ಧತೆ ನಡೆಸಿದೆ.
ಕೇಂದ್ರ ಸಚಿವ ಕುಮಾರಸ್ವಾಮಿ ಅಭಿನಂದನಾ ಕಾರ್ಯಕ್ರಮದ ಹೆಸರಿನಲ್ಲಿ ಡಿ. 15ರಂದು ಮಂಡ್ಯದಲ್ಲಿ ಬೃಹತ್ ಸಮಾವೇಶ ಆಯೋಜಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಡಿಸೆಂಬರ್ 16ರಂದು ಕೇಂದ್ರ ಸಚಿವ ಹೆಚ್‌ಡಿಕೆ ಹುಟ್ಟುಹಬ್ಬ. ಹೀಗಾಗಿ ಡಿ. 15ರಂದು ಮಂಡ್ಯದ ಸರ್.ಎಂ.ವಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲು ಸಿದ್ಧತೆ ನಡೆಸಲಾಗಿದೆ. ಈ ಕಾರ್ಯಕ್ರಮಕ್ಕೆ ಲಕ್ಷಕ್ಕೂ ಅಧಿಕ ಜನರನ್ನು ಸೇರಿಸಲು ಜೆಡಿಎಸ್ ಮುಂದಾಗಿದೆ.
ಬೃಹತ್ ಸಮಾವೇಶದ ಮೂಲಕ ಚನ್ನಪಟ್ಟಣ ಸೋಲಿನ ಹತಾಶೆಯಲ್ಲಿರುವ ಕಾರ್ಯಕರ್ತರನ್ನು ಹುರಿದುಂಬಿಸಲು ಹಾಗೂ ಠಕ್ಕರ್ ಕೊಡಲು ಜೆಡಿಎಸ್ ಮುಂದಾಗಿದೆ. ಈ ಮೂಲಕ ಹಳೇ ಮೈಸೂರು ಭಾಗದಲ್ಲಿ ಮೈತ್ರಿ ಪ್ರಾಬಲ್ಯ ಕುಗ್ಗದಂತೆ ನೋಡಿಕೊಳ್ಳಲು ಜೆಡಿಎಸ್ ಮುಂದಾಗಿದೆ.